Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

100 ಕೋಟಿ ಗೋಲ್ಡ್ ಸ್ಮಗ್ಲಿಂಗ್ ನಲ್ಲಿ ಸಿಕ್ಕಿಬಿದ್ದಿದ್ದ ನಟಿ ರನ್ಯಾ ರಾವ್ ರಿಲೀಸ್

---Advertisement---

ಬೆಂಗಳೂರು: ನಟಿ ರನ್ಯಾ ರಾವ್ ಸುಮಾರು 102 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಕೇಸ್ ನಲ್ಲಿ ಲಾಕ್ ಆಗಿದ್ದರು. ಇದೀಗ ವರ್ಷದ ಮೇಲೆ ಜೈಲಿನಿಂದ ರಿಲೀಸ್ ಆಗಿದ್ದಾರೆ. ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯವು ಜಾಮೀನನ್ನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ರನ್ಯಾ ರಾವ್ 2025ರಲ್ಲಿ ಅರೆಸ್ಟ್ ಆಗಿದ್ದರು. ಎರಡೇ ತಿಂಗಳಲ್ಲಿ ಅವರಿಗೆ ಜಾಮೀನು ಕೂಡ ಸಿಕ್ಕಿತ್ತು. ಆದರೆ ಜೈಲಿನಿಂದ ಹೊರಗೆ ಬರುವುದಕ್ಕೆ ಸಾಧ್ಯವಾಗಿರಲಿಲ್ಲ. ಇದೀಗ ಕೋಫೆಫೋಸಾ ಕಾಯ್ದೆಯಡಿ ರನ್ಯಾ ರಾವ್ ರಿಲೀಸ್ ಆಗಿದ್ದಾರೆ.

ಸಾಮಾನ್ಯವಾಗಿ ಕಳ್ಳಸಾಗಣೆ ಆರೋಪ ಹೊತ್ತವರಿಗೆ ಕೋಫೆಫೋಸಾ ಅಡಿಯಲ್ಲಿ ಒಂದು ವರ್ಷಗಳ ಕಾಲ ಶಿಕ್ಷೆಯನ್ನ ವಿಧಿಸಲಾಗುತ್ತದೆ. ಅದರಂತೆ ಇಂದು ಕೋಫೆಫೋಸಾ ಅಂತ್ಯಗೊಂಡಿದ್ದು, ಜೈಲಿನಿಂದ ಇಂದು ಬಿಡುಗಡೆಯಾಗುತ್ತಿದ್ದಾರೆ.

ಕಳೆದ ವರ್ಷ ಅಂದ್ರೆ 2025ರ ಮಾರ್ಚ್ 3 ರಂದು ರನ್ಯಾ ರಾವ್ ಅವರು ವಿಮಾನ ನಿಲ್ದಾಣದಲ್ಲಿ ಡಿಆರ್ಐ ಅಧಿಕಾರಿಗಳ ತಪಾಸಣೆಯ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಅವರ ಬಳಿ ಬರೋಬ್ಬರಿ 14.80 ಕೆಜಿ ಚಿನ್ಮ ಪತ್ತೆಯಾಗಿತ್ತು. ಒಟ್ಟು 102 ಕೋಟಿಗೂ ಅಧಿಜ ಮೌಲ್ಯದ ಚಿನ್ನ ಕಳ್ಳಸಾಗಣೆ ಜಾಲದಲ್ಲಿ ಇವರು ಭಾಗಿಯಾಗಿದ್ದರು. ಅವರ ತನಿಖೆಯ ನಂತರ ಸಾಕಷ್ಟು ವಿಚಾರಗಳು ಹೊರಗೆ ಬಂದವು. ಇದೀಗ ರನ್ಯಾ ರಾವ್ ಗೆ ಜಾಮೀನು ಸಿಕ್ಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...