Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹುಲ್ಲೂರು ಗ್ರಾಮದಲ್ಲಿ ಎನ್‌ಎಸ್‌ಎಸ್ ಶಿಬಿರ ಸಮಾರೋಪ: ವಿದ್ಯಾರ್ಥಿನಿಯರಲ್ಲಿ ಸೇವಾ ಮನೋಭಾವಕ್ಕೆ ಮೆಚ್ಚುಗೆ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 22 : ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುತ್ತವೆ. ಗ್ರಾಮ ವಾಸ್ತವ್ಯದ ಮೂಲಕ ವಿದ್ಯಾರ್ಥಿನಿಯರು ಗ್ರಾಮೀಣ ಬದುಕಿನ ಸವಾಲುಗಳನ್ನು ಹತ್ತಿರದಿಂದ ಕಂಡಿದ್ದಾರೆ,” ಅಲ್ಲದೆ ಹುಲ್ಲೂರಿನ ಜನರ ಸಹಕಾರ ಹಾಗೂ ಇಲ್ಲಿನ ಸಾಂಸ್ಕೃತಿಕ ಪರಿಸರವು ನಮ್ಮ ಶಿಬಿರಕ್ಕೆ ವಿಶೇಷ ಸಹಕಾರ ನೀಡಿದೆ. ಈ ಊರಿನಲ್ಲಿರುವ ಸಂಘ ಸಂಸ್ಥೆಗಳು ಸೇವಾ ಮನೋಭಾವ ಅರ್ಪಣ ಭಾವನ್ನು ಮೂಡಿಸುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಿವಣ್ಣ ಹೇಳಿದರು.

ಅವರು ತಾಲ್ಲೂಕಿನ ಹುಲ್ಲೂರು ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಒಂದು ವಾರದ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿನಿಯರ ಶ್ರಮದಾನವನ್ನು ಶ್ಲಾಘಿಸಿದರು. ಶಿಬಿರದಿಂದ ಗ್ರಾಮದ ಸೌಂದರ್ಯ ಹೆಚ್ಚುವುದಲ್ಲದೆ, ಯುವಜನರಲ್ಲಿ ಸಾಮಾಜಿಕ ಕಳಕಳಿ ಮೂಡಲು ಸಹಕಾರಿಯಾಗಿದೆ ಎಂದು ಗ್ರಾಮದ ಮುಖಂಡರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ಯೋಜನಾಧಿಕಾರಿಗಳಾದ ಶ್ರೀ ಗಿರೀಶ್ ಅವರು ಶಿಬಿರದ ವರದಿಯನ್ನು ಮಂಡಿಸಿದರು. ಊರಿನ ಮುಖಂಡರಾದ ದೇವರಾಜ್ ಅವರು ಮಾತನಾಡುತ್ತಾ, ವಿದ್ಯಾರ್ಥಿನಿಯರ ಸೇವಾ ಮನೋಭಾವವನ್ನು ಕೊಂಡಾಡಿದರು.

ಅವರು 16. 04. 2026 ರಿಂದ 22. 04 2026 ವರೆಗೆ ಕಳೆದ ಏಳು ದಿನಗಳಿಂದ ನಡೆದ ಈ ಶಿಬಿರದಲ್ಲಿ ವಿದ್ಯಾರ್ಥಿನಿಯರು ಹುಲ್ಲೂರು ಗ್ರಾಮದ ಪ್ರಮುಖ ರಸ್ತೆಗಳ ಸ್ವಚ್ಛತೆ, ಶಾಲಾ ಆವರಣದ ನವೀಕರಣ, ಜನಗಣತಿ ಹಾಗೂ ಆರೋಗ್ಯ ಜಾಗೃತಿ ಜಾಥಾಗಳನ್ನು ನಡೆಸಿಕೊಟ್ಟರು. ವಿಶೇಷವಾಗಿ ಮಹಿಳಾ ಸಬಲೀಕರಣ ಮತ್ತು ಸ್ವಚ್ಛ ಭಾರತ್ ಅಭಿಯಾನದ ಕುರಿತು ಬೀದಿ ನಾಟಕಗಳ ಮೂಲಕ ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಯಿತು ಎಂದರು. ಮುಂದುವರೆದು ಶಿಬಿರಕ್ಕೆ ಸಹಕಾರ ನೀಡಿದ ಎಲ್ಲಾ ಗ್ರಾಮದ ಮುಖಂಡರು, ಹಿರಿಯರು, ಗಣ್ಯರು, ಹಾಗೂ ಹಾಲು ಒಕ್ಕೂಟದ ಎಲ್ಲಾ ಅಧ್ಯಕ್ಷ, ಸದಸ್ಯರು, ಹಾಗೂ ಆಂಜನೇಯ ದೇವಸ್ಥಾನ ಸಮಿತಿಯ ಎಲ್ಲಾ ಸದಸ್ಯರುಗಳನ್ನು ನೆನಪಿನ ಕಾಣಿಕೆ ಕೊಡುವ ಮೂಲಕ ಸ್ಮರಿಸಲಾಯಿತು.

ಈ ಸಂದರ್ಭದಲ್ಲಿ ಎನ್ ಎಸ್ ಎಸ್ ಶಿಬಿರದ ಸಹ ಶಿಬಿರಾದಿಕಾರಿಗಳಾದ ಶ್ರೀ ಮೋಹನ್ ಕುಮಾರ್ ಎಂ. ಶಿವಪ್ರಸಾದ್ ಆರ್. ಕಾಲೇಜಿನ ಉಪನ್ಯಾಸಕ ವೃಂದ, ಸಿಬ್ಬಂದಿ ವರ್ಗ ಹಾಗೂ ಹುಲ್ಲೂರು ಗ್ರಾಮದ ಮುಖಂಡರಾದ ಕಲ್ಲೇಶ್, ದೇವರಾಜ್ , ಪ್ರವೀಣ್ ನಾಗೇಶ್, ಮಹೇಶ್ವರಪ್ಪ, ರಾಮಚಂದ್ರ ರೆಡ್ಡಿ , ರಾಜಪ್ಪ ಸುಭಾಷ್ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...