ಬೆಂಗಳೂರು: ಇಂದು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ ಕಲಬುರಗಿ ಕೊನೆಯ ಸ್ಥಾನ ಪಡೆದುಕೊಂಡಿದೆ. 7,70,209 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದರು. ಅದರಲ್ಲಿ 7,24,794 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯೂ ಶೇಕಡ 98.40 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ರೆ ಶೇಕಡ 98.18 ಫಲಿತಾಂಸದ ಪಡೆದ ಉಡುಪಿ ದ್ವಿತೀಯ ಸ್ಥಾನದಲ್ಲಿದೆ. ಶೇಕಡ 85.06 ಫಲಿತಾಂಶದೊಂದಿಗೆ ಕಲಬುರಗಿ ಜಿಲ್ಲೆ ಕಡೆಯ ಸ್ಥಾನಕ್ಕೆತೃಪ್ತಿ ಪಟ್ಟುಕೊಂಡಿದೆ.

ಈ ಬಾರಿಯ ಫಲಿತಾಂಶದಲ್ಲಿ ಏಳು ವಿದ್ಯಾರ್ಥಿಗಳು ಔಟ್ ಆಫ್ ಔಟ್ ಅಂಕಗಳನ್ನ ಪಡೆದುಕೊಂಡಿದ್ದಾರೆ. ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಶ್, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ ವಿದ್ಯಾರ್ಥಿಗಳು 625 ಅಂಕಕ್ಕೆ 625 ಅಂಕವನ್ನು ಪಡೆದುಕೊಂಡು ಶಾಕೆ ಹಾಗೂ ಕುಟುಂಬದ ಕೀರ್ತಿಯನ್ನ ಹೆಚ್ಚಿಸಿದ್ದಾರೆ.
















