ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 23 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಪ್ರೌಢಶಾಲೆಯು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗೆ ಸಮಾನ ಆದ್ಯತೆ ನೀಡುತ್ತಾ ಗ್ರಾಮೀಣ ವಿದ್ಯಾರ್ಥಿಗಳ ಆಶಾಕಿರಣವಾಗಿದೆ. 2025-26 ನೇ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ವರ್ಷವೂ ಶೇ 100 ರಷ್ಟು ಫಲಿತಾಂಶವನ್ನು ಪಡೆದುಕೊಂಡಿದೆ.
ಈ ವರ್ಷ ಪರೀಕ್ಷೆಗೆ ಹಾಜರಾದ ಒಟ್ಟು 87 ವಿದ್ಯಾರ್ಥಿಗಳಲ್ಲಿ, ಅತ್ಯುತ್ತಮ ಶ್ರೇಣಿಯಲ್ಲಿ 19 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 58, ದ್ವಿತೀಯ ಶ್ರೇಣಿಯಲ್ಲಿ 10 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಇವರಲ್ಲಿ ಲಿಖಿತಾ ಆರ್. ಅವರು 597 ಅಂಕಗಳನ್ನು ಪಡೆಯುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಅತ್ಯುತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳ ವಿವರ:-
• ಲಿಖಿತಾ. ಆರ್. 597 ಅಂಕಗಳು (95.52%)
• ಕನ್ನಡದಲ್ಲಿ 125 ಕ್ಕೆ 125 ಅಂಕಗಳನ್ನು ಪಡೆದ ವಿದ್ಯಾರ್ಥಿಗಳು – 05
• ಹಿಂದಿಯಲ್ಲಿ 100 ಕ್ಕೆ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳು – 03
• ಸಮಾಜ ವಿಜ್ಞಾನದಲ್ಲಿ 100 ಕ್ಕೆ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳು – 01
ಈ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ವೆಂಕಟೇಶ್ ರೆಡ್ಡಿಯವರು ಮತ್ತು ಕಾರ್ಯದರ್ಶಿಗಳಾದ ಶ್ರೀಮತಿ ಸುಹಾಸಿನಿ ವೆಂಕಟೇಶ್ ರೆಡ್ಡಿಯವರು, ಮುಖ್ಯೋಪಾಧ್ಯಾಯರು, ಶಿಕ್ಷಕರು ಮತ್ತು ಬೋಧಕೇತರ ವರ್ಗದವರು ಅಭಿನಂದಿಸಿರುತ್ತಾರೆ.








