ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 23 : ತಾಲೂಕಿನ ಸಾಣಿಕೆರೆಯ ವೇದಾ ಶಾಲೆಯ ವಿದ್ಯಾರ್ಥಿಗಳು SSLC ಪರೀಕ್ಷೆಯಲ್ಲಿ 100% ಉತ್ತಮ ಫಲಿತಾಂಶದೊಂದಿಗೆ ಒಂದು ಪ್ರತಿಷ್ಠಿತ ಸಂಸ್ಥೆಯಾಗಿ ಗುಣಮಟ್ಟದ ಶಿಕ್ಷಣಕ್ಕೆ ಒಮ್ಮೆ ತಿರುಗಿ ನೋಡುವಂತೆ ಸಾಧನೆ ಮಾಡಿದೆ.
2025-26ನೇ ಸಾಲಿನ SSLC ಪರೀಕ್ಷೆಗೆ ಒಟ್ಟು 90 ವಿದ್ಯಾರ್ಥಿಗಳು ಹಾಜರಾಗಿದ್ದು, ಇದರಲ್ಲಿ 39 ವಿದ್ಯಾರ್ಥಿಗಳು Distinction , 45ವಿದ್ಯಾರ್ಥಿಗಳು ಪ್ರಥಮ ದರ್ಜೆ, 06 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಮೂಲಕ ಬೃಂದಾ ಜೆ.-618,(98.88%) ಯಶಸ್ ಗೌಡ-609 ಹಾಗೂ ಜಗದೀಶ್ ರೆಡ್ಡಿ , ಶ್ರೀರಂಗ, ಭೂತೇಶ್ ಬಾಲಾಜಿ, ಧನುಶ್.ವಿ. ತಲಾ 605 ಅಂಕಗಳನ್ನು ಗಳಿಸುವುದರೊಂದಿಗೆ ಅತ್ಯುತ್ತಮ ಸಾಧನೆಯನ್ನು ತೋರಿದ್ದಾರೆ.
ಉತ್ತಮ ಸಾಧನೆಯನ್ನು ತೋರಿದ ವಿದ್ಯಾರ್ಥಿಗಳಿಗೆ ಹಾಗೂ ಶ್ರಮಿಸಿದಂತಹ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರಿಗೆ ಸಂಸ್ಥೆಯ ಅಧ್ಯಕ್ಷರಾದ ಡಿ ಟಿ ರವೀಂದ್ರರವರು ಹೃದಯಪೂರ್ವಕವಾಗಿ ಅಭಿನಂದಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











