ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 23 : ನಗರದ ಪ್ರತಿಷ್ಠಿತ ಶಾಲೆಯಾದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ, ವಿದ್ಯಾರ್ಥಿಗಳು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ 100% ರಷ್ಟು ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 99 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ
1. ಹರ್ಷಿಣಿ – 98.08 %
2. ರಶ್ಮಿತಾ – 96.96 %
3. ಸೈಯದ್ ಮಾಜ್ – 96.80 % ಅತಿಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಉಳಿದಂತೆ 45 ವಿದ್ಯಾರ್ಥಿಗಳು ಶೇ.85ಕ್ಕಿಂತ ಹೆಚ್ಚು ಅಂಕ, 47 ವಿದ್ಯಾರ್ಥಿಗಳು ಶೇ.60 ಕ್ಕಿಂತ ಹೆಚ್ಚು ಅಂಕ ಹಾಗೂ 04 ವಿದ್ಯಾರ್ಥಿಗಳು ಶೇ.50ಕ್ಕಿಂತ ಹೆಚ್ಚು ಅಂಕ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.
100ಕ್ಕೆ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳ ವಿವರ :
ಕನ್ನಡ – (125/125) – 02, (125/124) – 02
ಇಂಗ್ಲೀಷ್ – (100/99) – 03
ಹಿಂದಿ – (100/100) – 09, (100/99) – 11
ಗಣಿತ – (100/100) – 01, (100/98) – 02
ಸಾಮಾನ್ಯ ವಿಜ್ಞಾನ – (100/98) – 02
ಸಮಾಜ ವಿಜ್ಞಾನ – (100/100) – 02, (100/99) – 03
ಅತ್ಯುತ್ತಮ ಸಾಧನೆಗೈದ ಎಲ್ಲಾ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಶ್ಲಾಘಿಸಿ ತುಂಬು ಹೃದಯದಿಂದ ಅಭಿನಂದಿಸಿರುತ್ತಾರೆ.







