Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಬಡ್ಡಿ ಬೆಟ್ಟಿಂಗ್ ಕೇಸ್ : ಗೃಹ ಸಚಿವ ಪರಮೇಶ್ವರ್ ಗೆ ರಿಲೀಫ್..!

ಸಚಿವ ಪರಮೇಶ್ವರ್
---Advertisement---

ತುಮಕೂರು: 500 ರೂಪಾಯಿ ಬೆಟ್ಟಿಂಗ್ ವಿಚಾರದಲ್ಲಿ ಗೃಹ ಸಚಿವ ಪರಮೇಶ್ವರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊರಟಗಯಲ್ಲಿ ನಡೆದಿದ್ದ ಕಬಡ್ಡಿ ಪಂದ್ಯಾವಳಿ ವೇಳೆ 500 ರೂಪಾಯಿಯನ್ನು ಪರಮೇಶ್ವರ್ ಅವರು ಬೆಟ್ಟಿಂಗ್ ಕಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತಡೆ ನೀಡಿದೆ.

ಜನಪ್ರತಿನಿಧಿಗಳ ಕೋರ್ಟ್ ಎಫ್ಐಆರ್ ದಾಖಲಿಸುವಂತೆ ಸೂಚನೆ ನೀಡಿತ್ತು. ಈ ಸಂಬಂಧ ಪರಮೇಶ್ವರ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಪೀಠವು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ತೆಗೆದುಕೊಂಡ ತೀರ್ಮಾನದ ಬಗ್ಗೆ ಪ್ರಶ್ನೆ ಮಾಡಿತ್ತು. ಗೃಹಸಚಿವ ಪರಮೇಶ್ವರ್ ಯಾವ ಗ್ಯಾಂಗ್‌ನ ಸದಸ್ಯರು? ಈ ವಿಚಾರವನ್ನು ತಮಾಷೆಗೆ ಹೇಳಿರುವುದು ಅಲ್ಲವೇ? ಮ್ಯಾಜಿಸ್ಟ್ರೇಟ್ ಪೊಲೀಸರಿಗೆ ನೋಟಿಸ್ ನೀಡಬೇಕಿತ್ತು ಅಲ್ವಾ? ಅಂತ ಪ್ರಶ್ನಸಿದರು. ಇದೇ ವೇಳೆ ಪೊಲೀಸರು ಹಾಗೂ ದೂರುದಾರ ನಿಗೆ ನೋಟೀಸ್ ನೀಡಿ, ಹೈಕೋರ್ಟ್ ವಿಚಾರಣೆಯನ್ನ ಮುಂದೂಡಿದೆ.

ಇತ್ತೀಚೆಗೆ ಚಿಕ್ಕೋಡಿ ಹಾಗೂ ವಿಜಯಪುರ ನಡುವೆ ಕಬ್ಬಡಿ ಪಂದ್ಯಾವಳಿ ನಡೆದಿತ್ತು. ಈ ಪಂದ್ಯಾವಳಿಯಲ್ಲಿ ಚಿಕ್ಕೋಡಿ ತಂಡ ಗೆಲ್ಲುತ್ತೆ ಅಂತ ಪರಮೇಶ್ವರ್ ಅವರು 500 ರೂಪಾಯಿ ಬೆಟ್ಟಿಂಗ್ ಕಟ್ಟಿದ್ದರು. ಆದರೆ ವಿಜಯಪುರ ತಂಡ ಗೆದ್ದಿತ್ತು. ಆಗ ಡಿಸಿಗೆ ಪರಮೇಶ್ವರ್ ಅವರು 500 ರೂಪಾಯಿ ನೀಡಿದ್ದರು. ಇದನ್ನ ಗಮನಿಸಿದ್ದಂತ ನಾಗಭೂಷಣ್ ಅವರು ಕೋರ್ಟ್ ಗೆ ಹೋಗಿದ್ದರು. ಪರಮೇಶ್ವರ್ ಅವದ ವಿರುದ್ಧ ದೂರು ದಾಖಲಿಸುವಂತೆ, ಎಫ್ಐಆರ್ ಹಾಕುವಂತೆ ಮನವಿ ಮಾಡಿದ್ದರು. ಕೋರ್ಟ್ ಕೂಡ ದೂರುದಾರನ ಮನವಿ ಸ್ವೀಕಾರ ಮಾಡಿತ್ತು. ಇದೀಗ ಹೈಕೋರ್ಟ್ ನಲ್ಲಿ ಪರಮೇಶ್ವರ್ ವಿರುದ್ಧ ಎಫ್ಐಆರ್ ದಾಖಲಿಸದಂತೆ ತಡೆ ನೀಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now