ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 23 : 2025-26 ನೇ ಸಾಲಿನ ಎಸ್ ಎಸ್ ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿನ ಗೂಳಯ್ಯನಹಟ್ಟಿಯಲ್ಲಿ ಸಮಾಜಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2025-26ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಅತ್ಯುತ್ತಮ ಸಾಧನೆ ಮಾಡಿದೆ.
ಕಳೆದ ಐದು ವರ್ಷಗಳಿಂದ ನಿರಂತರವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಗಳಿಸಿದ್ದು ಈ ಬಾರಿ ಶೇ. 100 ಫಲಿತಾಂಶ ಪಡೆದುಕೊಂಡಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಒಟ್ಟು 47 ವಿದ್ಯಾರ್ಥಿಗಳಲ್ಲಿ 47 ಜನ ಉತ್ತೀರ್ಣರಾಗಿದ್ದಾರೆ. ಅತ್ಯುನ್ನತ ಶ್ರೇಣಿಯಲ್ಲಿ 28, ಪ್ರಥಮ ಶ್ರೇಣಿಯಲ್ಲಿ 17, ಹಾಗೂ ದ್ವಿತೀಯ ಶ್ರೇಣಿಯಲ್ಲಿ 2 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಮೊರಾರ್ಜಿ ಶಾಲೆಯಲ್ಲಿ ಯಶವಂತ ಪಾಟೀಲ್ ಎನ್.ಸಿ. 610 (97.60) ಪಡೆದು ಮೊದಲ ಸ್ಥಾನ, ಸಿಂಚನ.ಡಿ. 590 (94.40) ದ್ವಿತೀಯ ಸ್ಥಾನ, ಜೀವಿತಾ.ಆರ್. 583 (93.28) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಉಳಿದಂತೆ ಉಮಾ ಮಹೇಶ್ವರಿ ಎಸ್.ಆರ್. 583 (93.28), ಚಂದ್ರಶೇಖರ್.ಎನ್. 582 (93.12), ರೋಹಿಣಿ.ಟಿ. 582 (93.12), ಸೋಮೇಶ್ ಸಿ.ಎನ್. 577 (92.32), ಖುಷಿ ಬಿ.ಕೋಟಿ 576 (92.16), ಸಾಕ್ಷಿ ಎಸ್.ಎಂ 575 (92), ಲೋಹಿತ್ ಕುಮಾರ್ ಹೆಚ್.ಎ. 567 (90.72) ಅಂಕ ಗಳಿಸುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯತ ಸಿಇಒ ಡಾ.ಆಕಾಶ್ ಮತ್ತು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ್ ಅವರ ಮಾರ್ಗದರ್ಶನ ಮತ್ತು ಆದೇಶದಂತೆ ಜೂನ್ ತಿಂಗಳಿಂದ ಉತ್ತಮ ಫಲಿತಾಂಶ ಪಡೆಯಲು ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ, ವಿದ್ಯಾರ್ಥಿಗಳನ್ನು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಲಾಗಿತ್ತು. ಇದರಿಂದ ಈ
ಫಲಿತಾಂಶ ಪಡೆಯಲು ಸಾಧ್ಯವಾಗಿದೆ. ಶಾಲೆಯ ಬೋಧಕ ವರ್ಗ ಮತ್ತು ಎಲ್ಲಾ ಸಿಬ್ಬಂದಿ ವರ್ಗ ಸೇರಿದಂತೆ ಶಾಲೆಯ ಎಲ್ಲರ ಪರಿಶ್ರಮಕ್ಕೆ ಮತ್ತು ವಿದ್ಯಾರ್ಥಿಗಳ ಸಾಧನೆಗೆ ಪ್ರಾಂಶುಪಾಲ ಎನ್. ಮಂಜುನಾಥ್ ರೆಡ್ಡಿ ಅಭಿನಂದನೆ ಸಲ್ಲಿಸಿದ್ದಾರೆ.
















