Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಡಿ ಸುಧಾಕರ್ ಅವರ ಆರೋಗ್ಯ ಈಗ ಹೇಗಿದೆ : ಕೆಸಿ ವಿರೇಂದ್ರ ಪಪ್ಪಿ ಹೇಳಿದ್ದೇನು..?

---Advertisement---

ಬೆಂಗಳೂರು: ಸಚಿವ ಡಿ ಸುಧಾಕರ್ ಅವರ ಆರೋಗ್ಯದ ಪರಿಸ್ಥಿತಿ ಗಂಭೀರವಾಗಿತ್ತು. ಈಗ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಶಾಸಕ ವಿರೇಂದ್ರ ಪಪ್ಪಿ ಮಾಹಿತಿ ನೀಡಿದ್ದಾರೆ. ಅವರ ಆರೋಗ್ಯ ಬಹಳ ಉತ್ತಮವಾಗಿದೆ. ಚಿಕಿತ್ಸೆಗೆ ಸ್ಪಂದಿಸ್ತಾ ಇದ್ದಾರೆ ಅಂತ ಇವತ್ತು ಬೆಳಗ್ಗೆ ಕೂಡ ಬರ್ತಾ, ದೂರವಾಣಿ ಮುಖಾಂತರ ಕೇಳಿದಾಗ ನಿನ್ನೆಗಿಂತ ಇಂದು ಹೆಚ್ಚಿನದಾಗಿ ಚಿಕಿತ್ಸೆಗೆ ಸ್ಪಂದಿಸ್ತಾ ಇದ್ದಾರೆ ಎಂಬ ಮಾಹಿತಿ ಸಿಕ್ಕಿದೆ ಎಂದಿದ್ದಾರೆ.

ಲಂಗ್ಸ್ ಇನ್ಫೆಂಕ್ಷನ್ ಯಾವುದರಿಂದ ಆಗಿದೆ ಎಂಬುದರ ಬಗ್ಗೆ ಖಚಿತವಾದ ಮಾಹಿತಿ ನನಗಿಲ್ಲ. ಒಬ್ಬೊಬ್ಬರು ಒಂದೊಂದು ರೀತಿಯ ಮಾಹಿತಿ ಹೇಳ್ತಾ ಇದ್ದಾರೆ. ಅವರ ಕುಟುಂಬದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಎಂದಿದ್ದಾರೆ.

ಸಚಿವ ಡಿ ಸುಧಾಕರ್ ಅವರು ಶ್ವಾಸಕೋಸ ಸಂಬಂಧ ಕಾಯಿಲೆಗೆ ಚಿಕಿತ್ಸೆಯನ್ನ ಪಡೆಯುತ್ತಿದ್ದರು. ಗಂಭೀರವಾಗಿದ್ದು, ಯಶವಂತಪುರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಹೆಚ್ವಿನ ಚಿಕಿತ್ಸೆಗೆ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಡಾ.ವೆಂಕಟಗಿರಿ ನೇತೃತ್ವದಲ್ಲಿ ಶ್ವಾಸಕೋಶ ಟ್ರಾನ್ಸಪ್ಲಾಂಟೇಷನ್ ಗೆ ಸಿದ್ಧತೆ ಮಾಡಿಕೊಳ್ಳಲಾಗ್ತಾ ಇದೆ ಎಂಬ ಮಾಹಿತಿ ಕೂಡ ಇದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಮೊಣಕಾಲು ನೋವಿನ ಚಿಕಿತ್ಸೆಗೂ ಅಡ್ಮಿಟ್ ಆಗಿದ್ದರು. ಅದೇ ಸಮಯದಲ್ಲಿ ಶ್ವಾಸಕೋಶದಲ್ಲಿ ಸಮಸ್ಯೆ ಇರುವುದು ತಿಳಿದು ಬಂದಿದೆ. ಆದಷ್ಟು ಬೇಗ ಗುಣಮುಖರಾಗಲಿ ಎಂದು ಅವರ ಬೆಂಬಲಿಗರು ಹಾಗೂ ಆಪ್ತರು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಅವರ ಕುಟುಂಬಸ್ಥರಿಗಂತೂ ಇದು ದೊಡ್ಡ ಆಘಾತವನ್ನೇ ತಂದೊಡ್ಡಿದೆ. ವೈದ್ಯರು ಕೂಡ ಚಿಕಿತ್ಸೆಗೆ ಸ್ಪಂದಿಸ್ತಾ ಇದ್ದಾರೆ ಎಂಬ ಮಾಹಿತಿಯನ್ನ ನೀಡಿದ್ದಾರೆ. ಇದೀಗ ಶಾಸಕ ಪಪ್ಪಿ ಕೂಡ ಅದೇ ವಿಚಾರವನ್ನ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now