ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ತಾಲ್ಲೂಕಿನ ತುರುವನೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.84.26ರಷ್ಟು ಫಲಿತಾಂಶ ಲಭಿಸಿದೆ. ಶಾಲೆಯ ಒಟ್ಟು 89 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಆ ಪೈಕಿ 75 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ. 84.26 ರಷ್ಟು ಫಲಿತಾಂಶ ದಾಖಲಾಗಿದೆ.
ಶಾಲೆಯ ಜೆ.ಕೆ.ಕಾವೇರಿ ಶೇ.96.08, ಎಸ್.ದಿವ್ಯ ಶೇ.94.4, ಕೆ.ಜಿ.ಗಂಗೋತ್ರಿ ಶೇ.92.96 ಹಾಗೂ ಹೆಚ್.ಟಿ.ಜಯಶ್ರೀ ಶೇ.91.81 ಅಂಕಗಳನ್ನು ಪಡೆದಿದ್ದಾರೆ.
9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 28 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 17 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ 19 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







