Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ಲಕ್ಷ್ಮಣ ಸವದಿ ಎದುರಲ್ಲೇ ಆಪ್ತನಿಗೆ ಹೃದಯಾಘಾತ!

---Advertisement---

 

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಶುಕ್ರವಾರ ನಡೆಯುತ್ತಿದ್ದ ಗೃಹ ಪ್ರವೇಶ ಕಾರ್ಯಕ್ರಮವೊಂದರಲ್ಲಿ ಅತ್ಯಂತ ಆಘಾತಕಾರಿ ಹಾಗೂ ದುರದೃಷ್ಟಕರ ಘಟನೆಯೊಂದು ಜರುಗಿದೆ. ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಲಕ್ಷ್ಮಣ ಸವದಿ ಅವರ ಪರಮಾಪ್ತ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರಾವಸಾಬ ಬೇವನೂರ ಅವರು ಸವದಿಯವರ ಕಣ್ಣೆದುರಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ತಾಂವಶಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಲಕ್ಷ್ಮಣ ಸವದಿ ಅವರೊಂದಿಗೆ ರಾವಸಾಬ ಬೇವನೂರ ಅವರು ಕೂಡ ಆಗಮಿಸಿದ್ದರು. ಕಾರ್ಯಕ್ರಮದ ಸಂಭ್ರಮದ ವಾತಾವರಣದ ನಡುವೆಯೇ ರಾವಸಾಬ ಬೇವನೂರ ಅವರಿಗೆ ಏಕಾಏಕಿ ತೀವ್ರ ಸ್ವರೂಪದ ಎದೆನೋವು ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆಯೇ ಲಕ್ಷ್ಮಣ ಸವದಿ ಅವರ ಎದುರಲ್ಲೇ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಎಚ್ಚೆತ್ತ ಲಕ್ಷ್ಮಣ ಸವದಿ ಹಾಗೂ ನೆರೆದಿದ್ದವರು ಅವರಿಗೆ ನೆರವು ಒದಗಿಸಿ, ಆಸ್ಪತ್ರೆಗೆ ಸಾಗಿಸಲು ಹರಸಾಹಸ ಪಟ್ಟರಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಮೃತ ರಾವಸಾಬ ಬೇವನೂರ ಅವರು ಕೇವಲ ರಾಜಕೀಯ ನಾಯಕರಾಗಿರದೆ, ಅಥಣಿ ತಾಲೂಕಿನಲ್ಲಿ ತಮ್ಮದೇ ಆದ ಜನಪ್ರಿಯತೆ ಹೊಂದಿದ್ದರು.ಅವರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಜನರ ಪರವಾಗಿ ಕೆಲಸ ಮಾಡಿದ್ದರು.ಪ್ರಸ್ತುತ ಹಾಲುಮತ ಸಮಾಜದ ತಾಲೂಕು ಅಧ್ಯಕ್ಷರಾಗಿ ಸಮಾಜದ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದರು. ಅವರ ಈ ಅಕಾಲಿಕ ಮರಣವು ಹಾಲುಮತ ಸಮಾಜ ಸೇರಿದಂತೆ ತಾಲೂಕಿನಾದ್ಯಂತ ಅಪಾರ ಬೆಂಬಲಿಗರಿಗೆ ಬರಸಿಡಿಲು ಬಡಿದಂತಾಗಿದೆ.

ಲಕ್ಷ್ಮಣ ಸವದಿ ಹಾಗೂ ರಾವಸಾಬ ಬೇವನೂರ ಅವರು ಬಹುಕಾಲದ, ದಶಕಗಳ ಹಳೆಯ ಆಪ್ತಮಿತ್ರರು. ರಾಜಕೀಯ ಹಾಗೂ ವೈಯಕ್ತಿಕವಾಗಿ ಸವದಿಯವರ ಪ್ರತಿಯೊಂದು ಹೆಜ್ಜೆಯಲ್ಲೂ ಬೆನ್ನೆಲುಬಾಗಿ ನಿಂತಿದ್ದ ಬೇವನೂರ ಅವರ ಅಗಲಿಕೆ, ಲಕ್ಷ್ಮಣ ಸವದಿ ಅವರನ್ನು ತೀವ್ರ ಶೋಕವನ್ನು ವ್ಯಕ್ತಪಡಿಸಿದ್ದಾರೆ,ಸಂತೋಷದಿಂದ ನಡೆಯುತ್ತಿದ್ದ ಗೃಹ ಪ್ರವೇಶದ ಮನೆಯಲ್ಲಿ ಕ್ಷಣಾರ್ಧದಲ್ಲಿಯೇ ಈ ದುರ್ಘಟನೆ ಸಂಭವಿಸಿದ್ದು, ಇಡೀ ತಾಂವಶಿ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಮೃತರ ಕುಟುಂಬಸ್ಥರು ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲುಮುಟ್ಟಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now