Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಎಪಿ ದಿಕ್ಕು ತಪ್ಪಿದದ್ದರಿಂದಲೇ ನಾಯಕರ ನಿರ್ಗಮನ: ಅಣ್ಣಾ ಹಜಾರೆ ಟೀಕೆ

---Advertisement---

ನವದೆಹಲಿ : ಆಮ್ ಆದ್ಮಿ ಪಕ್ಷದ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣ ಹಜಾರೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಪಕ್ಷ ಸರಿಯಾದ ಮಾರ್ಗದಲ್ಲಿ ಸಾಗಿದ್ದರೆ ರಾಘವ ಚಡ್ಡಾ ಸೇರಿದಂತೆ ಇತರ ರಾಜ್ಯಸಭಾ ಸದಸ್ಯರು ಪಕ್ಷ ತೊರೆಯುವ ಪರಿಸ್ಥಿತಿ ಎದುರಾಗುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಜಾರೆ, “ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ತಮ್ಮದೇ ಅಭಿಪ್ರಾಯ ಹೊಂದುವ ಹಕ್ಕಿದೆ. ಚಡ್ಡಾ ಮತ್ತು ಇತರರು ಪಕ್ಷದೊಳಗೆ ಕೆಲವು ತೊಂದರೆಗಳನ್ನು ಎದುರಿಸಿದ್ದರಿಂದಲೇ ಅವರು ಹೊರಬಂದಿದ್ದಾರೆ” ಎಂದು ತಿಳಿಸಿದ್ದಾರೆ.

ಇದಕ್ಕೂ ಮೊದಲು ದೆಹಲಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ರಾಘವ್ ಚಡ್ಡಾ ಹಾಗೂ ಸಂದೀಪ್ ಪಾಠಕ್ ಸೇರಿದಂತೆ ಹಲವು ನಾಯಕರು, ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದರು. ಈ ಬೆಳವಣಿಗೆ ದೇಶದ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಅಣ್ಣಾ ಹಜಾರೆ ಈ ಕುರಿತು ಮತ್ತಷ್ಟು ಪ್ರತಿಕ್ರಿಯೆ ನೀಡುತ್ತಾ, “ಪಕ್ಷದ ನಾಯಕತ್ವದ ದಿಕ್ಕು ಸರಿಯಾಗಿದ್ದರೆ ಇಂತಹ ನಿರ್ಗಮನಗಳು ನಡೆಯುತ್ತಿರಲಿಲ್ಲ. ಇದು ನಾಯಕತ್ವದ ವೈಫಲ್ಯವನ್ನೇ ತೋರಿಸುತ್ತದೆ” ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ.

ಎಎಪಿ ಪಕ್ಷದೊಳಗಿನ ಒಳಭಿನ್ನತೆ ಹಾಗೂ ನಾಯಕತ್ವದ ಮೇಲಿನ ಅಸಮಾಧಾನ ಮತ್ತೊಮ್ಮೆ ಹೊರಬಿದ್ದಿದ್ದು, ಈ ಬೆಳವಣಿಗೆ ಮುಂದಿನ ದಿನಗಳಲ್ಲಿ ಪಕ್ಷದ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...