ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 25 : ಮಾರುತಿ ಸಾಂಸ್ಕೃತಿಕ ಕಲಾ ಸಂಘ ವತಿಯಿಂದ ವಿವಿಧ ಅಕಾಡೆಮಿ ಪ್ರಾಧಿಕಾರಗಳ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭವನ್ನು ದಿನಾಂಕ : 26-04-2026 ನೇ ಭಾನುವಾರ ಬೆಳಿಗ್ಗೆ ಹನ್ನೊಂದು ಘಂಟೆಗೆ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಏರ್ಪಡಿಸಲಾಗಿದೆ.
ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಡಾ.ಗೊಲ್ಲಹಳ್ಳಿ ಶಿವಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸಕಾ೮ರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ ಮುದ್ದಜ್ಜಿ ಅಧ್ಯಕ್ಷತೆ ವಹಿಸುವರು.
ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್.ಮಹೇಶ್ವರಪ್ಪ, ವಕೀಲರ ಸಂಘದ ಕಾರ್ಯದರ್ಶಿ ಎಚ್.ಓ.ಜಗದೀಶ್ ಮುಂತಾದವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ, ಸಾಹಿತ್ಯ ಅಕಾಡೆಮಿ ಮತ್ತು ಪುಸ್ತಕ ಪ್ರಾಧಿಕಾರದ ಪ್ರಶಸ್ತಿ ಪುರಸ್ಕೃತ ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ, ಬಸವ ವಚನಭೂಷಣ ಪ್ರಶಸ್ತಿ ಪುರಸ್ಕೃತ ತೋಟಪ್ಪ ಎಂ.ಉತ್ತಂಗಿ, ಕರ್ನಾಟಕ ನಾಟಕ ಅಕಾಡೆಮಿ ಮತ್ತು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಜಿ.ಎನ್.ವಿರೂಪಾಕ್ಷಪ್ಪ ಆಯಿತೋಳು, ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಪ್ರಶಸ್ತಿ ಪುರಸ್ಕೃತ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಇವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಸಂಘದ ಕಾರ್ಯದರ್ಶಿ ಜಿ.ವಿ.ಮಾರುತೇಶ ಆಯಿತೋಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











