Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಏಪ್ರಿಲ್ 27 ರಂದು ಪೊಲೀಸ್ ತರಬೇತಿ ಶಾಲೆಯಲ್ಲಿ ಸಂಗೀತೋತ್ಸವ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಏ. 25 : ಮದಕರಿ ಯುವಕ ಸಂಘ (ರಿ), ಚಿತ್ರದುರ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಐಮಂಗಲದ ಪೊಲೀಸ್ ತರಬೇತಿ ಶಾಲೆ ಸಂಯುಕ್ತಾಶ್ರಯದಲ್ಲಿ ಏ. 27ರ ಸೋಮವಾರ ಸಂಜೆ 4.30ಕ್ಕೆ  ಐಮಂಗಲದ ಪೊಲೀಸ್ ತರಬೇತಿ ಶಾಲೆಯಲ್ಲಿ ಸಂಗೀತೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಮದಕರಿ ಯುವಕ ಸಂಘ (ರಿ) ಅಧ್ಯಕ್ಷರಾದ ಸೋಮಶೇಖರ್ ತಿಳಿಸಿದ್ದಾರೆ.

ಈ ಸಂಗೀತೋತ್ಸವದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ವೀಣಾವಾದನ ಜನಪದ ಸಂಗೀತ ತತ್ವ ಪದಗಳು, ವಚನ ಸಂಗೀತ, ಸಂಗಮ ಸಂಗೀತ, ದಾಸರಪದ, ಕನ್ನಡ ಗೀತಗಾಯನ, ರಂಗಗೀತೆಗಳು ಗಾಯನ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮವನ್ನು ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಸದಸ್ಯರಾದ ಡಾ. ಜೆ .ಕರಿಯಪ್ಪ ಮಾಳಿಗೆ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಪೋಲಿಸ್ ತರಬೇತಿ ಶಾಲೆಯ ಪ್ರಾಂಶುಪಾಲರಾದ ಪಿ.ಪಾಪಣ್ಣ ವಹಿಸಲಿದ್ದಾರೆ. ಕನ್ನಡ ಮತ್ತು ಸಾಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಬಿ.ಎಮ್. ಗುರುನಾಥ್ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ವಡ್ಡಿಕೆರೆ ಕಾಂತರಾಜು ಮದಕರಿ ಬಳಗದ ಡಿ. ಗೋಪಾಲಸ್ವಾಮಿ ನಾಯಕ ಆಕಾಶವಾಣಿ ಕಲಾವಿದರು, ಸಂಗೀತ ಪ್ರಾಧ್ಯಾಪಕರು, ಆನಂದ್ ಆರ್ ಪಾಟೀಲ್ ಅಮುಕುಂದಿ ಗಂಗಾಧರ .ಕೆ, ಭಾಗವಹಿಸಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...