Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಹೈಟೆಕ್ ಆಟೋ, ಟ್ಯಾಕ್ಸಿ ಸ್ಟ್ಯಾಂಡ್ ನಿರ್ಮಾಣಕ್ಕೆ ಪಪ್ಪಿಸ್ ಸ್ಟೂಡೆಂಟ್ ವಿಂಗ್ ಬೇಡಿಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್ 25: ನಗರದ ವಿವಿಧ ಪ್ರದೇಶಗಳಲ್ಲಿ ಹೈ ಟೆಕ್ ಆಟೋ ಸ್ಟ್ಯಾಂಡ್ ಮತ್ತು ಟ್ಯಾಕ್ಸಿ ಸ್ಟ್ಯಾಂಡ್ ಗಳನ್ನ ನಿರ್ಮಿಸಬೇಕೆಂದು ಪಪ್ಪಿಸ್ ಸ್ಪೂಡೆಂಟ್ ವಿಂಗ್ ಕಾರ್ಯಕರ್ತರು ಶನಿವಾರ ನಗರಸಭೆ ಪೌರಯುಕ್ತೆ ಲಕ್ಷ್ಮಿ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.

 

ಚಿತ್ರದುರ್ಗ ನಗರದಲ್ಲಿ ದಿನನಿತ್ಯ ಸಾವಿರಾರು ನಾಗರಿಕರಿಗೆ ಸೇವೆ ಸಲ್ಲಿಸುತ್ತಿರುವ ಆಟೋ ಚಾಲಕರು ಸೂಕ್ತವಾದ ಅಟೋ ತಂಗುದಾಣಗಳ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನಗರದ ಅನೇಕ ಪ್ರಮುಖ ಸ್ಥಳಗಳಲ್ಲಿ ಅಟೋ ಸ್ಟಾಂಡ್ ವ್ಯವಸ್ಥೆ ಇಲ್ಲದ ಕಾರಣ, ಆಟೋ ಸವಾರರು ಬಿಸಿಲು, ಮಳೆ ಮತ್ತು ಇತರ ಅನಾನುಕೂಲಕರ ಪರಿಸ್ಥಿತಿಗಳಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಬೇಕಾದ ಅನಿವಾರ್ಯತೆ ಎದುರಾಗಿದೆ.

 

ನಗರದಲ್ಲಿ ಪ್ರಮುಖ ವೃತ್ತಗಳು, ಬಸ್ ನಿಲ್ದಾಣಗಳ ಬಳಿ, ಸರ್ಕಾರಿ ಕಚೇರಿಗಳ ಸುತ್ತಮುತ್ತ ಹಾಗೂ ಜನಸಂಚಾರ ಹೆಚ್ಚು ಇರುವ ಪ್ರದೇಶಗಳಲ್ಲಿ ಹೈ ಟೆಕ್ ಆಟೋ ಸ್ಟ್ಯಾಂಡ್ ಮತ್ತು ಟ್ಯಾಕ್ಸಿ ಸ್ಟ್ಯಾಂಡ್ ಗಳನ್ನು ನಿರ್ಮಿಸುವುದು ಅತ್ಯಂತ ಅಗತ್ಯವಾಗಿದೆ. ಈ ಸ್ಟ್ಯಾಂಡ್‌ಗಳಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ, ಶೆಡ್, ಕುಡಿಯುವ ನೀರಿನ ವ್ಯವಸ್ಥೆ, ಬೆಳಕು ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಿದರೆ ಆಟೋ ಚಾಲಕರಿಗೆ ಬಹಳ ಉಪಕಾರವಾಗುತ್ತದೆ ಎಂದು ಮನವಿಯನ್ನ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪಪ್ಪಿಸ್ ಸ್ಪೂಡೆಂಟ್ ವಿಂಗ್ ಅಧ್ಯಕ್ಷ ರವೀಂದ್ರ ಚಿನ್ನು , ಕಾರ್ಯದರ್ಶಿ ಸಲೀಂ ಸದಸ್ಯರಾದ ದರ್ಶನ್, ಮಿಥುನ್ ಇದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...