Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಲ್ಲವನ್ನು ಕಾನೂನು ಬದ್ಧವಾಗಿಯೇ ಖರೀದಿಸಿದ್ದು : ರವಿ ಡಿ ಚನ್ನಣ್ಣನವರ್ ಸ್ಪಷ್ಟನೆ

Facebook
Twitter
Telegram
WhatsApp

ಬೆಂಗಳೂರು: ಕೆಲ ದಿನಗಳಿಂದ ರವಿ ಡಿ ಚನ್ನಣ್ಣನಬರ್ ಬಗ್ಗೆ ಕೆಲವೊಂದಿಷ್ಟು ಆರೋಪಗಳು ಓಡಾಡುತ್ತಿವೆ. ಇದೀಗ ಆ ಬಗ್ಗೆ ಅವರೇ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿರುತ್ತವೆ. ಸಾಮಾಜಿಕ ಜಾಲತಾಣದಲ್ಲಿ, ನನ್ನ ತಂದೆ-ತಾಯಿಯವರ ಹೆಸರಲ್ಲಿರುವ ಕೆಲ ಪಹಣಿ ಹಾಕಿ, ಆರೋಪಿಸಿದ್ದು, ಅವುಗಳೆಲ್ಲ ಕಾನೂನು ಬದ್ಧವಾಗಿಯೇ ಖರೀದಿಸಿದ್ದು, ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿ ಗಳಾಗಿವೆ. ಅವುಗಳನ್ನೆಲ್ಲ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿರುತ್ತಾರೆ.

ಇವುಗಳನ್ನು ನಾನು ಭ್ರಷ್ಟ ರೀತಿಯಿಂದ ಸಂಪಾದಿಸಿದ್ದೇನೆ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನನ್ನನ್ನು ತೇಜೋವಧೆ ಮಾಡಬೇಕೆಂದೇ ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸುತ್ತಿದ್ದು, ನಾನೊಬ್ಬ ಅಖಿಲ ಭಾರತೀಯ ಸೇವಕನಾಗಿದ್ದು, ಸೇವಾ ನಿಯಮಗಳ ಅಡಿ ವರ್ತಿಸಬೇಕಾದ್ದು ನನ್ನ ಕರ್ತವ್ಯ ಆದ್ದರಿಂದ ಈ ಕುರಿತಂತೆ ನಾನು ಇದಾವುದಕ್ಕೂ ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೇ ಕಾನೂನುಬದ್ಧವಾಗಿ ಈ ಕೆಳಕಂಡಂತೆ ಕ್ರಮ ಕೈಗೊಂಡಿರುತ್ತೆನೆ.

1. ನಾನು ಈಗಾಗಲೇ ಕಾನೂನಾತ್ಮಕವಾಗಿ ನಮ್ಮ ನ್ಯಾಯವಾದಿಗಳ ಮೂಲಕ ಲೀಗಲ್ ನೋಟಿಸ್ ನೀಡಿರುತ್ತೇನೆ. ಇದಕ್ಕೆ ಉತ್ತರ ಬಂದಿರುವುದಿಲ್ಲ

2.ನಾನು ಈ ಕುರಿತು ಸಂಬಂಧಪಟ್ಟ ಮಾನ್ಯ ನ್ಯಾಯಾಲಯದಲ್ಲಿ , ರೂಪಾಯಿ 3 ಕೋಟಿಗೆ ಮಾನನಷ್ಟ ಮೊಕದ್ದಮೆಯನ್ನ
ದಾಖಲಿಸಲಿದ್ದೇನೆ.

3.ಹಾಗೆಯೇ ಸುಳ್ಳು ಆಪಾದನೆ ಮಾಡಿದ್ದಕ್ಕೆ, ಎರಡು ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಸಂಬಂಧಪಟ್ಟ ಮಾನ್ಯ ನ್ಯಾಯಾಲಯದಲ್ಲಿ ಕ್ರಿಮಿನಲ್ DEFEMATION ಕೇಸ್ ಹೂಡಲಿದ್ದೇನೆ.

ನನಗೆ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರಿಗೆ, ಎಲ್ಲಾ ಸುಳ್ಳು ಸುದ್ದಿಗಳನ್ನು ನಂಬದಂತೆ, ಎಲ್ಲ ಆತ್ಮೀಯರಲ್ಲಿ ಮನವಿ ಮಾಡಿಕೊಳ್ಳುತ್ತೇನೆ.

ಮಾಧ್ಯಮಗಳು ಪ್ರಚಾರ ಮಾಡದಂತೆ ತಡೆಯಾಜ್ಞೆ ತಂದದ್ದು ಅವುಗಳ ಅಭಿವ್ಯಕ್ತಿ ಸತ್ವವನ್ನು ಕುಗ್ಗಿಸಲು ಅಲ್ಲ. ಅನೇಕ ಸಂಕಷ್ಟಗಳ ನಡುವೆ ಬೆಳೆದ ನಾನು ನನ್ನ ಸ್ವಾಭಿಮಾನ ಮತ್ತು ವ್ಯಕ್ತಿತ್ವದ ಬಗ್ಗೆ ಸದಾ ಎಚ್ಚರದಲ್ಲಿ ಇದ್ದೇನೆ. ಕೆಲವು ಸುಳ್ಳು ಸುದ್ದಿಗಳು ನನ್ನ ಬಗ್ಗೆ ಹರಿದಾಡಿದ ಕಾರಣ ನಾನು ತಡೆಯಜ್ಞೆ ತಂದದ್ದನ್ನು ಅನ್ಯತಾ ಭಾವಿಸಬಾರದೆಂದು ಈ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಚಿಸಿದ್ದೇನೆ.
ಹಾಗೆಯೇ ನನಗೆ ನ್ಯಾಯವಾದಿಗಳ ಬಗ್ಗೆ ಸ್ವಚ್ಛ ವ್ಯವಸ್ಥೆ ಬಯಸುವವರ ಬಗ್ಗೆ, ಅಪಾರ ಗೌರವವಿದೆ, ಈ ಮೂಲಕ ನನ್ನ ಆತ್ಮೀಯರೆಲ್ಲರಿಗೂ ಮನವಿ ಮಾಡುವುದೇನೆಂದರೆ, ತಾವು ದಯಮಾಡಿ ಯಾವುದೇ ಪ್ರತಿಕ್ರಿಯೆ ನೀಡಬಾರದು, ಅಶ್ಲೀಲ ಪದ ಬಳಕೆ, ಹೀಯಾಳಿಸುವುದನ್ನು ಮಾಡಬಾರದು. ಎಂದು ಎಲ್ಲಾ ಮಾಧ್ಯಮಗಳ ಮೂಲಕ ಕೇಳಿಕೊಳ್ಳುತ್ತೇನೆ ಎಂದು ಪತ್ರದ ಮೂಲಕ ಸ್ಪಷ್ಟಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅದ್ದೂರಿಯಾಗಿ ನಡೆದ ಚಂದನಾ ಅನಂತಕೃಷ್ಣ ಮ್ಯಾರೇಜ್ : ಕಿರುತೆರೆ ನಟ-ನಟಿಯರಿಂದ ಶುಭ ಹಾರೈಕೆ

ಚಂದನಾ ಅನಂತಕೃಷ್ಣ ಅವರ ಅಭಿಮಾನಿಗಳಿಗೆ ಎರಡೆರಡು ಖುಷಿ. ಒಂದು ಕಡೆ ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಚಂದನಾ ತಾಯಿಯಾಗುತ್ತಿರುವ ವಿಚಾರಕ್ಕೆ ಖುಷಿಯಾದರೆ, ಮತ್ತೊಂದು ಕಡೆ ರಿಯಲ್ ಆಗಿ ಮದುವೆಯಾಗಿದ್ದಾರೆ. ಇಂದು ಅದ್ದೂರಿಯಾಗಿ ಚಂದನಾ ಅವೆ ಮದುವೆ

ಅನೂರ್ಜಿತ ಬೆಳೆ ಕಟಾವು ಮಾಡಿದರೆ ಅಧಿಕಾರಿಗಳ ಅಮಾನತು : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ನ.28: ಬೆಳೆ ಕಟಾವು ಪ್ರಯೋಗ ನಡೆಸಿ, ಉದ್ದೇಶ ಪೂರ್ವಕವಾಗಿ ತಪ್ಪು ದತ್ತಾಂಶವನ್ನು ತಂತ್ರಾಂಶದಲ್ಲಿ ನಮೂದು ಮಾಡಿರುವುದು ಕಂಡು ಬಂದರೆ, ಸಂಬಂದಿಸಿದ ಅಧಿಕಾರಿಯ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.

ಶೇ.100 ರಷ್ಟು ಜನನ-ಮರಣ ನೋಂದಣಿಗೆ ಕ್ರಮ ವಹಿಸಿ :  ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ.28:  ಜಿಲ್ಲೆಯಲ್ಲಿ ಶೇ.100 ರಷ್ಟು ಜನನ-ಮರಣ ನೋಂದಣಿ ಪ್ರಕ್ರಿಯೆ ಸಮರ್ಪಕವಾಗಿ ಕೈಗೊಳ್ಳಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ

error: Content is protected !!