Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಏ.30ರಿಂದ ಪಿಯುಸಿ ಪರೀಕ್ಷೆ-2 ಆರಂಭ: ಗೊಂದಲಕ್ಕೆ ಕಡಿವಾಣಕ್ಕೆ ಅಧಿಕಾರಿಗಳ ಸೂಚನೆ

---Advertisement---

ಚಿತ್ರದುರ್ಗ. ಏ.27: ದ್ವಿತೀಯ ಪಿಯುಸಿ ಪರೀಕ್ಷೆ-2 ಇದೇ ಏಪ್ರಿಲ್ 30 ರಿಂದ ಮೇ 13 ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ 4270 ಪರೀಕ್ಷಾರ್ಥಿಗಳು ನೊಂದಾಯಿಸಿಕೊಂಡಿದ್ದು, ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ. ಗೊಂದಲಕ್ಕೆ ಅವಕಾಶ ನೀಡದೇ ಸುಸೂತ್ರವಾಗಿ ಪರೀಕ್ಷಾ ಕಾರ್ಯ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ದ್ವಿತೀಯ ಪಿಯುಸಿ ಪರೀಕ್ಷೆ-2ರ ಸಿದ್ದತೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಅದೇ ರೀತಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನೂ ಗಂಭೀರವಾಗಿ ಪರಿಗಣಿಸಿ ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಪರೀಕ್ಷಾ ಕಾರ್ಯನಿರ್ವಹಿಸಬೇಕು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.

 

ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕೆಂದು ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತ ವಾತಾವರಣದಲ್ಲಿ ನಡೆಸಲು ಪರೀಕ್ಷೆ ನಡೆಯುವ ದಿನಗಳಂದು, ಪರೀಕ್ಷೆ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ವ್ಯಾಪ್ತಿಯಲ್ಲಿ ಯಾವುದೇ ಜೆರಾಕ್ಸ್ ಹಾಗೂ ಕಂಪ್ಯೂಟರ್ ಸೆಂಟರ್‍ಗಳು ನಿಷೇಧಾಜ್ಞೆ ಸಮಯದಲ್ಲಿ ಕಾರ್ಯನಿರ್ವಹಿಸುವಂತಿಲ್ಲ ಎಂದು ತಿಳಿಸಿದರು.

 

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಕೆ.ತಿಮ್ಮಯ್ಯ ಮಾತನಾಡಿ, ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಜಿಲ್ಲೆಯಲ್ಲಿ ಸಿದ್ಧತೆಗಳು ಪೂರ್ಣಗೊಂಡಿದ್ದು, ಒಟ್ಟು 4,270 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

 

ಜಿಲ್ಲೆಯಲ್ಲಿ ಈ ಬಾರಿ ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದ 2,540 ವಿದ್ಯಾರ್ಥಿಗಳು ಮರು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ. ಫಲಿತಾಂಶ ಸುಧಾರಣೆಗಾಗಿ 2026ರ ಸಾಲಿನ 591 ವಿದ್ಯಾರ್ಥಿಗಳು ಹಾಗೂ 2025ರ ಸಾಲಿನ 7 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ಸಾಲಿನ ಹಾಗೂ ಅದಕ್ಕಿಂತ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾಗಿದ್ದ 1,072 ಪುನರಾವರ್ತಿತ ಅಭ್ಯರ್ಥಿಗಳು ಈ ಬಾರಿ ಪರೀಕ್ಷೆ ಎದುರಿಸಲಿದ್ದಾರೆ. ಇದಲ್ಲದೆ, ಹಾಜರಾತಿ ಕೊರತೆಯ ಕಾರಣದಿಂದ ‘ಖಾಸಗಿ’ ವಿಭಾಗದಲ್ಲಿ 60 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

 

ಜಿಲ್ಲೆಯಲ್ಲಿ 06 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡಯಲಿದೆ. ಚಿತ್ರದುರ್ಗ ನಗರದ  ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು, ಚಳ್ಳಕೆರೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು, ಹಿರಿಯೂರು ನಗರದ ಸರ್ಕಾರಿ ಪದವಿಪೂರ್ವ ಕಾಲೇಜು, ಹೊಸದುರ್ಗ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ಮೊಳಕಾಲ್ಮುರು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಹೊಳಲ್ಕೆರೆ ಪಟ್ಟಣದ ಎಂ.ಎಂ ಸರ್ಕಾರಿ ಪದವಿಪೂರ್ವ ಕಾಲೇಜುನಲ್ಲಿ ಪರೀಕ್ಷೆ ನಡೆಯಲಿದೆ. ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಅವಶ್ಯಕತೆ ಇದೆ.

 

ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್‍ಗಳನ್ನು ತರುವುದನ್ನು ಕಡ್ಡಾಯಾವಗಿ ನಿಷೇಧಿಸಲಾಗಿದೆ.  ಪರೀಕ್ಷೆ ನಡಯುವ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನು ವಿಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.

 

ಪರೀಕ್ಷಾ ವೇಳಾಪಟ್ಟಿ : ದ್ವಿತೀಯ ಪಿಯುಸಿ ಪರೀಕ್ಷೆ-2ರ ವೇಳಾಪಟ್ಟಿ ವಿವರ ಇಂತಿದೆ. ಏಪ್ರಿಲ್ 30ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಕನ್ನಡ ಮತ್ತು ಅರೇಬಿಕ್ ಭಾಷೆ, ಮೇ 01 ರಜಾ ದಿನ. ಮೇ 02ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ಮೇ 03ರಂದು ರಜಾ ದಿನ. ಮೇ 04ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಇಂಗ್ಲಿಷ್, ಮೇ 05ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ವ್ಯವಹಾರ ಅಧ್ಯಯನ, ಭೌತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೇ 06ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಅರ್ಥಶಾಸ್ತ್ರ, ಜೀವಶಾಸ್ತ್ರ, ಮೇ 07ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಇತಿಹಾಸ, ಗಣಿತ, ಗೃಹವಿಜ್ಞಾನ, ಮೇ 08ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ರಾಜ್ಯಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ, ಮೇ 09ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೂಗರ್ಭಶಾಸ್ತ್ರ, ಮೂಲಗಣಿತ, ಮೇ 10ರಂದು ರಜಾ ದಿನ. ಮೇ 11ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ, ಮೇ 12ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಹಿಂದಿ, ಮೇ 13ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ತಮಿಳು, ತೆಲಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕøತ, ಫ್ರೆಂಚ್ ವಿಷಯಗಳ ಪರೀಕ್ಷೆ ನಡೆಯಲಿದೆ. ಮೇ 13ರಂದು ಮಧ್ಯಾಹ್ನ 2 ರಿಂದ ಸಂಜೆ 4.15 ರವರೆಗೆ ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್ ಮತ್ತು ಯಂತ್ರಾಂಶ ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು ಮಾಹಿತಿ ತಂತ್ರಜ್ಞಾನ, ರೀಟೈಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್ ವೆಲ್‍ನೆಸ್ ವಿಷಯದ ಪರೀಕ್ಷೆಗಳು ನಡೆಯಲಿವೆ.
ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...