Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಪದತ್ಯಾಗ ಮಾಡಿದರೆ ದಲಿತರು ಸಿಎಂ ಆಗ್ಲಿ : ರಾಜಣ್ಣ

---Advertisement---

ಬೆಂಗಳೂರು: ಸಿಎಂ ಬದಲಾವಣೆಯ ಚರ್ಚೆ ಮತ್ತೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ಪದತ್ಯಾಗಕ್ಕೆ ಸಿದ್ಧರಾಗಿದ್ದಾರೆ ಎಂದೇ ಹೇಳಲಾಗ್ತಿದೆ. ಈ ಬೆನ್ನಲ್ಲೇ ಮಾಜಿ ಸಚಿವ ಕೆ ಎನ್ ರಾಜಣ್ಣ ಮಾತನ್ನಾಡಿದ್ದು, ಸಿಎಂ ಬದಲಾವಣೆಯಾಗುವುದಾದರೆ ದಲಿತರೇ ಸಿಎಂ ಆಗಲಿ ಎಂದಿದ್ದಾರೆ. ಈ ದಲಿತ ಸಿಎಂ ಚರ್ಚೆ ಇಂದು ನಿನ್ನೆಯದ್ದಲ್ಲ. ಬಹಳಷ್ಟು ವರ್ಷಗಳಿಂದ ಈ ಚರ್ಚೆ ನಡೀತಾನೆ ಇದೆ.

ರಾಜಣ್ಣ ಅವರು ಹೇಳಿರುವ ಪ್ರಕಾರ, ಅಧಿಕಾರ ಮುಂದುವರೆಸಲು ಅಥವಾ ಪದತ್ಯಾಗ ಮಾಡಲು ಸಿದ್ದರಾಮಯ್ಯ ಅವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಆಗಬೇಕು ಎನ್ನುವುದು ನಮ್ಮ ಪ್ರಬಲ ಒತ್ತಾಯವಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮುಕ್ತ ಮನಸ್ಸಿನಲ್ಲಿದ್ದಾರೆ. ಹೈಕಮಾಂಡ್ ಮತ್ತು ರಾಹುಲ್ ಗಾಂಧಿ ಅವರು ನೀಡುವ ಯಾವುದೇ ಸೂಚನೆಯನ್ನು ಪಾಲಿಸುವುದಕ್ಕೂ ಅವರು ಸಿದ್ಧರಿದ್ದಾರೆ ಎಂದಿದ್ದಾರೆ.

ಅಧಿಕಾರ ಮುಂದುವರೆಸಲು ಅಥವಾ ಪದತ್ಯಾಗ ಮಾಡಲು ಅವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಪಕ್ಷದ ಹಿತಾದೃಷ್ಟಿಯಿಂದ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುವುದಾಗಿಯೂ ತಿಳಿಸಿದ್ದಾರೆ. ರಾಜ್ಯದಲ್ಲಿ ಮುಂದಿನ ಬಾರಿ ದಲಿತ ಸಮುದಾಯದ ನಾಯಕರು ಮುಖ್ಯಮಂತ್ರಿಯಾಗಬೇಕು ಎಂಬುದು ನಮ್ಮ‌ ಬೇಡಿಕೆ. ಈ ವಿಚಾರವನ್ನು ನಮ್ಮ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಇದರೊಂದಿಗೆ ಸಚಿವ ಸಂಪುಟ ಪುನರ್ ರಚನೆಯೂ ಆಗಬೇಕಿದೆಮ ಹೊಸಬರಿಗೆ ಸಚಿವ ಸ್ಥಾನ ನೀಡುವ ಮೂಲಕ ಆಡಳಿತದಲ್ಲಿ ಹೊಸ ಬದಲಾವಣೆ ತರಬೇಕಿದೆ. 2013-18ರ ಅವಧಿಯ ಸಿದ್ದರಾಮಯ್ಯ ಅವರಿಗೂ ಈಗಿನ ಸಿದ್ದರಾಮಯ್ಯ ಅವರಿಗೂಬಹಳ ವ್ಯತ್ಯಾಸವಿದೆ. ಅಹಿಂದ ವರ್ಗದ ನಿರೀಕ್ಷೆಗಳು ಸರಿಯಾಗಿ ಈಡೇರುತ್ತಿಲ್ಲ ಎಂಬ ಅಸಮಾಧಾನ ಆ ವರ್ಗದಲ್ಲಿ ಮೂಡೊದೆ ಎಂಬ ಮಾತನ್ನ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...