Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ಆಯ್ತು ಬಾಗಲಕೋಟೆಯಲ್ಲೂ ಕಾಂಗ್ರೆಸ್ ನಿಂದ ಶಿಸ್ತಿನ ಬಿಸಿ..!

---Advertisement---

ಬಾಗಲಕೋಟೆ : ಆಡಳಿತ ಪಕ್ಷವಾಗಿರುವ ಕಾಂಗ್ರೆಸ್ ಎರಡು ಕಡೆ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿತ್ತು. ಅದರೆ ಅದ್ಯಾಕೋ ಏನೋ ನಡೆದ ಕೆಲ ಬದಲಾವಣೆಗಳು ಕಾಂಗ್ರೆಸ್ ಹೈಕಮಾಂಡ್ ಕೋಪಕ್ಕೆ ಕಾರಣವಾದಂತೆ ಕಾಣಿಸ್ತಿದೆ. ದಾವಣಗೆರೆಯಲ್ಲಿ ಮುಸ್ಲಿಮರು ಕೈಕೊಟ್ರು ಅಂತ ನಸೀರ್ ಹಾಗೂ ಜಬ್ಬರ್ ಅವರನ್ನು ಅಮಾನತು ಮಾಡಲಾಗಿತ್ತು. ಇದೀಗ ಬಾಗಲಕೋಟೆ ಸರದಿ ಬಂದಿದೆ. ಬಾಗಲಕೋಟೆಯಲ್ಲೂ ಹಲವರಿಗೆ ಶಿಸ್ತಿನ ಬಿಸಿ ಮುಟ್ಟಿಸಿದ್ದಾರೆ.

ಬಾಗಲಕೋಟೆ ಉಪಚುನಾವಣೆಯಲ್ಲೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಮೂವರು ಪ್ರಭಾವಿ ಕಾಂಗ್ರೆಸ್ ಮುಖಂಡರನ್ನು ಅಮಾನತುಗೊಳಿಸಲಾಗಿದೆ. ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ್ ಕಡ್ಲಿಮಟ್ಟಿ ಹಾಗೂ ಕಮತಗಿ ಪಟ್ಟಣ ಪಂಚಾಯತ್ವ ಸದಸ್ಯರಾದ ರಮೇಶ್ ಜಮಖಂಡಿ ಮತ್ತು ಗುರುಲಿಂಗ ಪಾಟೀಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್ ಜಿ ನಂಜಯ್ಯಮಠ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಬದಲಿಗೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಬೆಂಬಲ ನೀಡಿದ ಆರೋಪ ಕೇಳಿ ಬಂದಿದೆ. ಸ್ಥಳೀಯ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಎಸ್ ಎನ್ ರಾಂಪುರ ಅವರು ಈ ಮುಖಂಡರ ವಿರುದ್ಧ ದೂರು ನೀಡಿ ಉಚ್ಛಾಟನೆಗೆ ಪತ್ರ ಬರೆದಿದ್ದರು. ಈ ದೂರಿನ ಆಧಾರದ ಮೇಲೆ ಜಿಲ್ಲಾಧ್ಯಕ್ಷರು ಕಾರಣ ಕೇಳಿ ನೋಡೀಸ್ ನೀಡಿದ್ದರು. ಮುಖಂಡರಿಂದ ಯಾವುದೇ ಸಮರ್ಪಕ ಉತ್ತರ ಬಾರದ ಕಾರಣ ಅಂತಿಮವಾಗಿ ಅಮಾನತು ಕ್ರಮವನ್ನು ಕೈಗೊಳ್ಳಲಾಗಿದೆ. ಬಾಗಲಕೋಟೆಯಲ್ಲಿ ಕಮತಗಿ ಅತ್ಯಂತ ಪ್ರಮುಖ ಪಟ್ಟಣವಾಗಿದ್ದು, ಇಲ್ಲಿನ ಮತಗಳು ಅಭ್ಯರ್ಥಿಗಳ ಜಯಾಪಜಯ ನಿರ್ಧಾರ ಮಾಡುತ್ತವೆ. ಆದರೆ ಈ ನಡುವೆ ಪ್ರಭಾವಿ ನಾಯಕರೇ ಕಾಂಗ್ರೆಸ್ ಪಕ್ಷಕ್ಕೆ ಮೋಸ ಮಾಡಿದ್ದಾರೆಂಬ ಆರೋಪಗಳು ಕೇಳಿ ಬಂದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...