Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೇ 15ಕ್ಕೆ ಸಿಎಂ ಬದಲಾವಣೆ? ಡಿ.ಕೆ. ಶಿವಕುಮಾರ್ ಪರ ಘೋಷಣೆ ರಾಜಕೀಯ ಸಂಚಲನ

---Advertisement---

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಮತ್ತೆ ಜೋರಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಶಾಸಕ ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.ಸುದ್ದಿಗಾರರೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, “ಮೇ 15ರಂದು ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಖಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಹಿಂದೆ ಕೆಲ ದಿನಾಂಕಗಳನ್ನು ಹೇಳಿದ್ದರೂ, ಈ ಬಾರಿ ಹೇಳುತ್ತಿರುವುದು ಅಂತಿಮ ಎಂದು ಅವರು ಸ್ಪಷ್ಟಪಡಿಸಿದರು.

ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಎನ್ನುವುದು ಕೇವಲ ವೈಯಕ್ತಿಕ ಅಭಿಪ್ರಾಯವಲ್ಲ; ರಾಜ್ಯದ ಅನೇಕ ಶಾಸಕರು ಮತ್ತು ಜನರ ಆಶಯವಾಗಿದೆ ಎಂದು ಹುಸೇನ್ ಹೇಳಿದ್ದಾರೆ. ಪಕ್ಷದ ಬೆಳವಣಿಗೆಗಾಗಿ ಶಿವಕುಮಾರ್ ಅವರು ಅಪಾರ ಶ್ರಮ ಪಟ್ಟಿದ್ದು, ಅವರ ತ್ಯಾಗ ಮತ್ತು ಪರಿಶ್ರಮಕ್ಕೆ ಈ ಸ್ಥಾನ ಸೂಕ್ತ ಪ್ರತಿಫಲವಾಗಬೇಕು ಎಂದು ಅಭಿಪ್ರಾಯಪಟ್ಟರು.ಇದೇ ವೇಳೆ, ಶಿವಕುಮಾರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಮುಖ್ಯಮಂತ್ರಿ ಸ್ಥಾನ ‘ಗಿಫ್ಟ್’ ಆಗಿ ಸಿಗಲಿ ಎಂಬ ಹಾರೈಕೆಯನ್ನೂ ಅವರು ವ್ಯಕ್ತಪಡಿಸಿದರು. ಅವರ ನಾಯಕತ್ವದಲ್ಲಿ ರಾಜ್ಯದ ಅಭಿವೃದ್ಧಿ ಇನ್ನಷ್ಟು ವೇಗ ಪಡೆಯಲಿದೆ ಎಂಬ ನಂಬಿಕೆ ನಮ್ಮದಲ್ಲ ಎಂದು ಹೇಳಿದರು.

ಇಕ್ಬಾಲ್ ಹುಸೇನ್ ಹೇಳಿಕೆಯಿಂದ ಕಾಂಗ್ರೆಸ್ ಒಳಗಲ್ಲೇ ಚರ್ಚೆಗಳು ತೀವ್ರಗೊಂಡಿದ್ದು, ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬುದರ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...