Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಸಿಗಾಳಿಗೆ ವಿರಾಮ: ಚಿತ್ರದುರ್ಗದಲ್ಲಿ ಮಳೆ, ರಾಜ್ಯದ ಹಲವೆಡೆ ಎಚ್ಚರಿಕೆ…!

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 29 : ತೀವ್ರ ಬಿಸಿಗಾಳಿಯಿಂದ ತತ್ತರಿಸಿದ್ದ ಜನತೆಗೆ ಮಳೆಯ ತಂಪು ನೆಮ್ಮದಿ ತಂದಿದೆ. ವಿಶೇಷವಾಗಿ ನಿನ್ನೆ ರಾತ್ರಿ ಚಿತ್ರದುರ್ಗದಲ್ಲಿ  ಮಳೆಯಾಗಿದ್ದು, ಒಣಗಿದ್ದ ಭೂಮಿಗೆ ತಂಪು ನೀಡಿದೆ. ಮಳೆಯೊಂದಿಗೆ ಮಣ್ಣಿನ ಸುವಾಸನೆ ಹರಡಿದ ಪರಿಣಾಮ ಜನರು ಸ್ವಲ್ಪ ಮಟ್ಟಿಗೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆಯನ್ನೂ ಇಲಾಖೆ ಸೂಚಿಸಿದೆ.

ಚಿತ್ರದುರ್ಗ, ದಾವಣಗೆರೆ ಸೇರಿದಂತೆ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದಿರಬೇಕೆಂದು ಸೂಚಿಸಲಾಗಿದೆ. ಬೆಂಗಳೂರು, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ವಿಜಯನಗರ, ಗದಗ, ಕೊಪ್ಪಳ, ಹಾವೇರಿ, ಧಾರವಾಡ, ಬೆಳಗಾವಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ.ಆಲಿಕಲ್ಲು ಮಳೆ ಮತ್ತು ಬಿರುಗಾಳಿಯ ಹಿನ್ನೆಲೆ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು.

ಸಿಡಿಲು, ಬಿರುಗಾಳಿ ಸಂದರ್ಭಗಳಲ್ಲಿ ಮರಗಳ ಕೆಳಗೆ ನಿಲ್ಲಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ರೈತರೂ ಕೃಷಿ ಚಟುವಟಿಕೆಗಳಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.ಇನ್ನೂ ಏಪ್ರಿಲ್ 28 ಮತ್ತು 29ರಂದು ಕರಾವಳಿ ಭಾಗದಲ್ಲಿಯೂ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...