Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೋರು ಗಾಳಿ, ಮಳೆ : ಬೆಂಗಳೂರಿನಲ್ಲಿ 8 ಜನ ಸಾವು..!

---Advertisement---

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇದ್ದಕ್ಕಿದ್ದ ಹಾಗೇ ಬಂದ ಗಾಳಿ, ಮಳೆಗೆ ಅವಾಂತರವೇ ಸೃಷ್ಟಿಯಾಗಿದೆ. ರಸ್ತೆಗಳಲ್ಲೆಲ್ಲಾ ಮರಗಳು ಬಿದ್ದು ಸಂಚಾರಕ್ಕೆ ಮೂರ್ನಾಲ್ಕು ಗಂಟೆಗಳ ಕಾಲ ಅಸ್ತವ್ಯಸ್ತವಾಗಿತ್ತು. ಇನ್ನು ಬೆಂಗಳೂರಿನ ಶಿವಾಜಿನಗರದಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 8 ಜನ ಸಾವನ್ನರುವ ಘಟನೆ ನಡೆದಿದೆ.‌

 

ಘಟನೆ‌ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಇದೇ ವೇಳೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು‌. ಬಳಿಕ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತ ಪ್ರಕರಣದಲ್ಲಿ 7 ಮಂದಿ ಮೃತಪಟ್ಟಿರುವುದನ್ನು ಅಧಿಕಾರಿಗಳು ತಿಳಿಸಿದರು. ವ್ಯಾಪರ ಮಾಡುತ್ತಿದ್ದವರ ಮೇಲೆ ಗೋಡೆ ಕುಸಿದ ಘಟನೆ ಬಗ್ಗೆ ಆಕ್ರೋಶಗೊಂಡ ಸಿಎಂ ಸ್ಥಳದಲ್ಲೇ ತನಿಖೆ ಮಾಡಲು ಆದೇಶ ನೀಡಿದರು.

ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದರು. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು. ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಸಿಎಂ ಭೇಟಿ ನೀಡಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು. ಕಾಂಪೌಂಡ್ ಕುಸಿದ ದುರಂತಕ್ಕೆ ಸಿಎಂ ಆಘಾತ. ಜಿಬಿಎ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡರು. ಏನ್ ಕ್ರಮಕೈಗೊಂಡಿದ್ದೀರಿ ಎಂದು ಸಿಎಂ ಕ್ಲಾಸ್. ಹಳೆ ಗೋಡೆ ನೋಡೋಕಾಗಲ್ವಾ…? ನಿಮ್ಮ ಮಧ್ಯೆ ಕೋ ಆರ್ಡಿನೇಷನ್ ಇರಲ್ವಾ? ಎಚ್ಚರವಹಿಸಿದ್ದರೆ ಈ ಅನಾಹುತ ತಪ್ಪಿಸಬಹುದಿತ್ತು. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಿಎಂ ಸಿದ್ದರಾಮಯ್ಯ ಅವರು ತರಾಟೆ ತೆಗೆದುಕೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...