ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 30 : ತಾಲ್ಲೂಕಿನ ಮಾಡನಾಯಕನಹಳ್ಳಿ ರಾಷ್ಟ್ರೀಯ ಹೆದ್ದಾರಿ 50 (ರಾಷ್ಟ್ರೀಯ ಹೆದ್ದಾರಿ 13) ರಲ್ಲಿ ಇಂದು ಬೆಳಗಿನ ಜಾವ 5 :30 ರ ಸುಮಾರಿಗೆ ಭೀಕರ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನರ ನಡೆದಿದೆ.

ಮೃತ ವ್ಯಕ್ತಿಯನ್ನು ಚಿತ್ರದುರ್ಗ ಮೂಲದ ಕೃತಿಕ್ (27 ವರ್ಷ) ಎಂದು ಗುರುತಿಸಲಾಗಿದೆ. ಹೊಸಪೇಟೆ ಕಡೆಯಿಂದ ಚಿತ್ರದುರ್ಗಕ್ಕೆ ಬರುವಾಗ ಮಾಡನಾಯಕನಹಳ್ಳಿ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮವಾಗಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಸೇರಿದಂತೆ ತುರುವನೂರು ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ತುರುವನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



















