ತುಮಕೂರು: ಚಿತ್ರದುರ್ಗದಲ್ಲಿ ಹಮ್ಮಿಕೊಂಡಿರುವ ಬಿಎಸ್ವೈ ಅಭಿಮಾನೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ತುಮಕೂರಿನಲ್ಲಿ ಪೂರ್ವಭಾವಿ ಸಭೆಯನ್ನ ಹಮ್ಮಿಕೊಳ್ಳಲಾಗಿದೆ. ಸ್ನೇಹಸಂಗಮದಲ್ಲಿ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಶಾಸಕ ಪ್ರೀತಂ ಗೌಡ ಸೇರಿದಂತೆ ಹಲವರು ಈ ಸಭೆಯಲ್ಲಿ ಭಾಗಿಯಾಗಿದ್ದರು. ನೂರಾರು ಸಂಖ್ಯೆಯಲ್ಲಿ ಯಡಿಯೂರಪ್ಪ ಅವರ ಅಭಿಮಾನಿಗಳು ಭಾಗಿಯಾಗುವ ನಿರೀಕ್ಷೆ ಇದೆ. ಹಸಿರು ಶಾಲು ಹಾಕಿಕೊಂಡು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಯಡಿಯೂರಪ್ಪ ಅಭಿಮಾನೋತ್ಸವ ಯಾವುದೇ ರಾಜಕಾರಣದ ಉದ್ದೇಶದಿಂದ ನಡೆಯುತ್ತಿರುವುದಲ್ಲ, ಅವರ ಮೇಲಿನ ಅಭಿಮಾನಕ್ಕಾಗಿ ನಡೆಯುತ್ತಿರುವುದು. ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದ ನೆಪದಲ್ಲಿ ವಿಜಯೇಂದ್ರ ಶಕ್ತಿ ಪ್ರದರ್ಶನ ಎಂಬ ಪ್ರಶ್ನೆ ಮನೆ ಮಾಡಿದೆ. ಆದರೆ ಇಲ್ಲಿ ಯಾವ ಶಕ್ತಿ ಪ್ರದರ್ಶನವೂ ಅಗತ್ಯವಿಲ್ಲ. ಕೇವಲ ಅಭಿಮಾನಕ್ಕೋಸ್ಕರ ಮಾಡ್ತಾ ಇರುವುದು ಎಂಬ ಮಾತನ್ನ ಬಿವೈ ವಿಜಯೇಂದ್ರ ಅವರು ಹೇಳಿದ್ದಾರೆ.
50 ವರ್ಷ ಪೂರೈಸಿದ್ದಾರೆ. ಕರ್ನಾಟಕದಲ್ಲಿ ಹೋರಾಟಕ್ಕೆ ಮತ್ತೊಂದು ಹೆಸರು ಅಂದ್ರೆ ಬಿಎಸ್ ಯಡಿಯೂರಪ್ಪ ಅವರು. ಪರಿಶ್ರಮಕ್ಕೆ ಮತ್ತೊಂದು ಹೆಸರು ಅಂದ್ರೆ ಬಿಎಸ್ ಯಡಿಯೂರಪ್ಪ ಅವರು. ಹಾಗಾಗಿ ಕರ್ನಾಟಕದಲ್ಲಿ ಕಳೆದ 50 ವರ್ಷಗಳಿಂದ ಬಡವರ, ಶೋಷಿತ ವರ್ಗದವರ, ರೈತರ ಪರವಾದ ಧ್ವನಿಯಾಗಿ, ನಿರಂತರವಾಗಿ, ದಣಿವರಿಯದೆ, ರಾಜ್ಯದ ಮೂಲೆಮೂಲೆಗಳಿಗೆ ಪ್ರವಾಸ ಮಾಡಿ, ರೈತರು ಎಲ್ಲಿಯೇ ಹೋರಾಟಮಾಡ್ತಾ ಇದ್ದರೆ ಅಲ್ಲಿ ಬಿಎಸ್ ಯಡಿಯೂರಪ್ಪ ಅವರು ಇರ್ತಾ ಇದ್ದರು. ಅಂಥೊಬ್ಬ ಹೋರಾಟಗಾರ, ಜನನಾಯಕನನ್ನು ಗೌರವಿಸಬೇಕು ಎಂಬ ಕಾರಣಕ್ಕೆ ಅಭಿಮಾನೋತ್ಸವವನ್ನು ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತಿಳಿಸಿದ್ದಾರೆ. ಈಗಾಗಲೇ ಅದ್ದೂರಿಯಾಗಿ ಅಭಿಮಾನೋತ್ಸವ ನಡೆಸಲು ಎಲ್ಲಾ ತರದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











