ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 30 : ನಗರದ ಪ್ರತಿಷ್ಠಿತ ಶಾಲೆಗಳಲ್ಲೊಂದಾದ ವಿದ್ಯಾ ವಿಕಾಸ ಐಸಿಎಸ್ಇ ಸ್ಕೂಲ್ನ ಪ್ರಥಮ ಬ್ಯಾಚ್ನ ವಿದ್ಯಾರ್ಥಿಗಳು 2025-26ನೇ ಸಾಲಿನ 10ನೇ ತರಗತಿ ICSE BOARD EXAM ನಲ್ಲಿ ಶೇಕಡ 100% ರಷ್ಟು ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಪ್ರಥಮ ಶೈಕ್ಷಣಿಕ ವರ್ಷದಲ್ಲೇ 2025-26ನೇ ಸಾಲಿನ 10ನೇ ತರಗತಿ ಫಲಿತಾಂಶದಲ್ಲಿ ಶಾಲೆಯ ವಿದ್ಯಾರ್ಥಿನಿಯಾದ ಶ್ರೀಶಾ ಎಸ್ ರೆಡ್ಡಿ ಅವರು ಶೇ.97.40% ಗಳಿಸಿ ಜಿಲ್ಲಾ ಮಟ್ಟದಲ್ಲಿ 2ನೆ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಈ ಬಾರಿಯ ICSE BOARD EXAM ನಲ್ಲಿ 43 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು, ಇದರಲ್ಲಿ 16 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ (ಶೇ.85ಕ್ಕಿಂತ ಹೆಚ್ಚು ಅಂಕ), 26 ವಿದ್ಯಾರ್ಥಿಗಳು ಪ್ರಥಮ ದರ್ಜೆ (ಶೇ.60 ರಿಂದ 84% ಕ್ಕಿಂತ ಹೆಚ್ಚು ಅಂಕ), ಒಬ್ಬ ವಿದ್ಯಾರ್ಥಿ ದ್ವಿತೀಯ ದರ್ಜೆ (ಶೇ.50ಕ್ಕಿಂತ ಹೆಚ್ಚು ಅಂಕ) ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.
ವಿದ್ಯಾರ್ಥಿಗಳ ಈ ಉತ್ಕøಷ್ಠ ಫಲಿತಾಂಶವು ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ, ಹಾಗೂ ಪೋಷಕರ ಸಹಕಾರದ ಫಲವಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








