ಬೆಂಗಳೂರು: ರಾಜಕೀಯನ ಬೇರೆ ಮಾನವೀಯ ಸಂಬಂಧಗಳು, ಹೆಮ್ಮೆ ಪಡುವ ವಿಚಾರಗಳೇ ಬೇರೆ. ಬೇರೆ ಬೇರೆ ಪಕ್ಷವಾದರೂ ಕೆಲವೊಂದು ಸಲ ಒಬ್ಬರಿಗೊಬ್ಬರು ಗೌರವಿಸುವ ಸಂದರ್ಭಗಳು ಸೃಷ್ಟಿಯಾಗುತ್ತವೆ. ಸಂಬಂಧಿಕರಾಗುವ ವಾತಾವರಣವೂ ನಿರ್ಮಾಣವಾಗುತ್ತವೆ. ರಾಜಕೀಯ ಮರೆತು ಹರಸು ಸಮಯಗಳು ಬರುತ್ತವೆ. ಇಷ್ಟೆಲ್ಲಾ ಹೇಳೋದಕ್ಕೆ ಕಾರಣ ಸಂಸದ ತೇಜಸ್ವಿ ಸೂರ್ಯ ಅವರು ಡಿಕೆ ಶಿವಕುಮಾರ್ ಅವರ ಬಗ್ಗೆ ಮಾಡಿರುವ ಆ ಒಂದು ಟ್ವೀಟ್.
https://x.com/i/status/2050256338643779783

ಇವತ್ತು DCM ಡಿ ಕೆ ಶಿವಕುಮಾರ್ ಅವರ ಜೊತೆ ಬೆಂಗಳೂರು ದಕ್ಷಿಣದ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದೆ. ಕಾರ್ಯಕ್ರಮಗಳ ಮಧ್ಯೆ ಕಾರಿನಲ್ಲಿ ಜೊತೆಗೆ ಪ್ರಯಾಣಿಸುವಾಗ ಅವರಿಗೆ ಮನೆಯಿಂದ ಪದೇ ಪದೇ ಫೋನ್ ಬರುತ್ತಿತ್ತು. ವಿಚಾರಿಸಿದಾಗ, “ಇವತ್ತು ನನ್ನ ಮಗಳ ಡೆಲಿವರಿ. ನಾನು ತಾತ ಆಗುತ್ತಿದ್ದೇನೆ” ಎಂದರು. ಒಂದು ಕಡೆ ಕುಟುಂಬದ ಅತ್ಯಂತ ಸಂತೋಷದ ಕ್ಷಣ. ಇನ್ನೊಂದು ಕಡೆ ಸಾರ್ವಜನಿಕ ಜವಾಬ್ದಾರಿ. ಆದರೂ ಅವರು ಫ್ಲೈಓವರ್ ಉದ್ಘಾಟನೆ, ಸ್ಕೈವಾಕ್ ಶಂಕುಸ್ಥಾಪನೆ ಸೇರಿದಂತೆ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾದರು. The first casualty of public life is personal life ಅಂತ ಮಾತಿದೆ. ಇಂತಹ ಸಂದರ್ಭಗಳಲ್ಲಿ ಆ ಮಾತಿನ ಅರ್ಥ ಇನ್ನಷ್ಟು ಸ್ಪಷ್ಟವಾಗುತ್ತದೆ. ತಾತನಾದ ಡಿ ಕೆ ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಮಗಳು ಐಶ್ವರ್ಯ ಅವರಿಗೆ, ಮಗುಗೆ ಮತ್ತು ಕುಟುಂಬಕ್ಕೆ ಭಗವಂತ ಆಯುಷ್ಯ, ಆರೋಗ್ಯ ಮತ್ತು ಸಂತೋಷ ಕರುಣಿಸಲಿ.

ಎಂದು ಡಿಕೆ ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಈ ರೀತಿಯ ಗೌರವಗಳು ಸ್ಪೂರ್ತಿದಾಯಕವಾಗಿ ಕಾಣುತ್ತವೆ. ರಾಜಕೀಯ ಏನೇ ಇರಲಿ, ಪಕ್ಷ ಯಾವುದೇ ಇರಲಿ ಒಳ್ಳೆಯದ್ದನ್ನ ಪ್ರಶಂಸಿದಾಗ ಅವರ ಬೆಂಬಲಿಗರಿಗೂ ಸ್ಪೂರ್ತಿಯಾಗುತ್ತದೆ.

















