Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಂದಿನ ಮೂರು ದಿನಗಳ ಕಾಲ ಗುಡುಗು,‌ಮಿಂಚು, ಗಾಳಿ ಸಹಿತ ಮಳೆ : ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ..?

---Advertisement---

ಬೆಂಗಳೂರು: ಬಿರು ಬಿಸಿಲಿನಿಂದ ಬೆಂದಿದ್ದ ಬೂತಾಯಿಗೂ, ಸೆಕೆ ಸೆಕೆ ಅಂತ ಒದ್ದಾಡುತ್ತಿದ್ದ ಜನತೆಗೂ, ಭೂಮಿ ಮೇಲೆ ಕಾಲಿಡಲಾಗದೆ ಸಂಕಟ ಪಡುತ್ತಿದ್ದ ಪ್ರಾಣಿಗಳಿಗೂ ಒಟ್ಟಾರೆ ಸಕಲ ಜೀವ ರಾಶಿಗಳಿಗೂ ವರುಣರಾಯ ತಂಪೆರೆದಿದ್ದಾನೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಮತ್ತಷ್ಟು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಮಿಂಚು, ಗುಡುಗು ಮತ್ತು ಗಾಳಿ ಸಹಿತ ಮಳೆಯಾಗಲಿದೆ ಎಂದು ತಿಳಿಸಿರುವ ಹವಮಾನ ಇಲಾಖೆ ಎಚ್ಚರದಿಂದ ಇರಲು ಸೂಚನೆ ನೀಡಿದೆ.

ಮೇ 3ರಿಂದ ಮೇ 5ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮೇ 4 ಮತ್ತು 5 ರಂದು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನೂ ನೀಡಲಾಗಿದೆ. ಬೀದರ್, ಕಲಬುರ್ಗಿ, ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಉಳಿದಂತೆ ಶುಷ್ಕ ಹವಾಮಾನ ಮುಂದುವರಿಯಲಿದೆ. ಮೇ 3 ರಂದು ಬೀದರ್ ಮತ್ತು ಕಲಬುರ್ಗಿಯಲ್ಲಿ ತಾಪಮಾನ ಏರಿಕೆಯ ಮುನ್ಸೂಚನೆ ಇದೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ, ತಣ್ಣಗೆ ಬೀಸುತ್ತಿರುವ ಗಾಳಿಯನ್ನ ನೋಡಿದರೆ ರಾತ್ರು ವೇಳೆಗೆ ಜೋರು ಮಳೆ ಬೀಳುವ ಸಾಧ್ಯತೆ ಇದೆ. ಕಳೆದ ಎರಡ್ಮೂರು ದಿನದಿಂದ ಸುರಿದ ಮಳೆಗೆ ಸಿಲಿಕಾನ್ ಸಿಟಿ ಮಂದಿಯ ಜೀವನ ಹೈರಾಣಾಗಿದೆ. ಇನ್ನು ಗುಡುಗು ಸಹಿತ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದ್ದು, ಕೊಂಚ ಜಾಗರೂಕರಾಗಿರಬೇಕಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now