Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾತ್ರಿ 8 ಗಂಟೆಯಾದ್ರು ಮತ ಎಣಿಕೆಯ ಮಾಹಿತಿ ನೀಡದ ಅಧಿಕಾರಿಗಳು : ನಡೆಯಿತು ಹೈಡ್ರಾಮ..!

---Advertisement---

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆಮತಗಳನ್ನು ಮರು ಎಣಿಕೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಅದರಂತೆ ಇಂದು ಅಂಚೆಮತಗಳ ಮತ ಎಣಿಕೆಯೂ ನಡೆದಿದೆ. ಆದರೆ ರಾತ್ರಿ ಎಂಟು ಗಂಟೆಯಾದರೂ ಫಲಿತಾಂಶ ಏನು..? ಯಾವ ಅಭ್ಯರ್ಥಿಗೆ ಮತಗಳು ಹೆಚ್ಚು ಬಂದಿವೆ ಎಂಬ ಮಾಹಿತಿಯನ್ನು ಅಲ್ಲಿನ ಅಧಿಕಾರಿಗಳು ನೀಡುತ್ತಿಲ್ಲ. ಅದರಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರೇ ಮರು ಮತ ಎಣಿಕೆಯಲ್ಲೂ ಮುಂದಿದ್ದಾರೆ. ಅವರದ್ದೇ ಗೆಲುವು ಎಂಬ ಮಾತುಗಳು ಕೇಳಿ ಬಂದಿವೆ. ಆದರೂ ಅಧಿಕಾರಿಗಳಿಂದ ಯಾವುದೇ ಉತ್ತರ ಬಾರದೆ ಇದ್ದ ಕಾರಣಕ್ಕೆ ಸ್ಥಳದಲ್ಲಿ ಹೈಡ್ರಾಮವೇ ಶುರುವಾಗಿದೆ.

ಇಷ್ಟು ತಡವಾದರೂ ಅಧಿಕಾರಿಗಳು ಸರಿಯಾದ ಮಾಹಿತಿ ಯಾಕೆ ನೀಡುತ್ತಾ ಇಲ್ಲ ಎಂಬುದೇ ಬಿಜೆಪಿ ಕಾರ್ಯಕರ್ತರ ಆಕ್ರೋಶವಾಗಿದೆ. ಚಿಕ್ಕಮಗಳೂರು ನಗರದ ಐಡಿಎಸ್‌ಜಿ (IDSG) ಕಾಲೇಜಿನಲ್ಲಿ ಮರು ಎಣಿಕೆ ಕಾರ್ಯ ನಡೆಯುತ್ತಿದ್ದ ವೇಳೆ, ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ನೇತೃತ್ವದಲ್ಲಿ ಎಣಿಕೆ ಕೇಂದ್ರಕ್ಕೆ ನುಗ್ಗಲು ಯತ್ನಿಸಿದ ಕಾರ್ಯಕರ್ತರು, ಘೋಷಣೆಯನ್ನು ಕೂಗಿದ್ದಾರೆ.

ಒಂದು ಕಡೆ ಬಿಜೆಪಿ ಕಾರ್ಯಕರ್ತರು ಬೇಕೆ ಬೇಕು ನ್ಯಾಯ ಬೇಕು ಎಂದು ಘೋಷಣೆ ಕೂಗುತ್ತಿದ್ದರೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಜಾರ್ಯಕರ್ತರು ಕೂಡ ಜಮಾಯಿಸಿದ್ದರು. ಅವರೆಲ್ಲ ಸೇರಿ ಗೆದ್ದರು ಗೆದ್ದರು ಗೌಡ್ರು ಗೆದ್ದರು ಎಂಬ ಘೋಷಣೆಗಳನ್ನು ಕೂಗಿ ಬಿಜೆಪಿ ಕಾರ್ಯಕರ್ತರನ್ನ ಮತ್ತಷ್ಟು ಕೆರಳುವಂತೆ ಮಾಡಿದರು. ಎರಡು ಪಕ್ಷಗಳ ಕಾರ್ಯಕರ್ತರ ಪ್ರತಿಭಟನೆಯಿಂದ ಪೊಲೀಸರು ಹೈರಾಣಾಗಿ ಹೋದರು. ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಜೋರು ವಾಗ್ವಾದ ನಡೆಯಿತು. ಇಮ್ನು ರಾಷ್ಟ್ರೀಯ ಹೆದ್ದಾರಿಯಲ್ಲೇ ಪ್ರತಿಭಟನೆ ನಡೆಸಿ, ಉದ್ವಿಗ್ನ ವಾತಾವರಣ ನಿರ್ಮಾಣ ಮಾಡಿದ್ದಾರೆ‌.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now