ಸುದ್ದಿಒನ್, ಚಿತ್ರದುರ್ಗ, ಮೇ 03 : ತಾಲೂಕಿನ ದೊಡ್ಡ ಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಪಿಯು ಕಾಲೇಜಿನಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ನೇಮಕಾತಿ ನಡೆಯಲಿದೆ. ವಿಜ್ಞಾನ ವಿಭಾಗದಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ಹಾಗೂ ಕಂಪ್ಯೂಟರ್ ಸೈನ್ಸ್ ವಿಷಯಗಳಿಗೆ, ವಾಣಿಜ್ಯ ವಿಭಾಗದಲ್ಲಿ ಅಕೌಂಟೆನ್ಸಿ, ಬಿಸಿನೆಸ್ ಸ್ಟಡೀಸ್, ಅರ್ಥಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ ವಿಷಯಗಳಿಗೆ ಉಪನ್ಯಾಸಕರ ಅಗತ್ಯವಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ಪರಿಚಯ ಪತ್ರ ಹಾಗೂ ಅಗತ್ಯ ಪ್ರಮಾಣಪತ್ರಗಳ ದೃಢೀಕೃತ ಪ್ರತಿಗಳೊಂದಿಗೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಸಮೂಹ ಸಂಸ್ಥೆಗಳ ಕಚೇರಿಗೆ ಸ್ವಯಂ ಹಾಜರಾಗಿ ಅರ್ಜಿ ಸಲ್ಲಿಸಬೇಕು.
ಇದೇ ಮಾಹಿತಿಯನ್ನು ಇಮೇಲ್ ([jnanapoornapucollege@gmail.com](mailto:jnanapoornapucollege@gmail.com)) ಅಥವಾ 9900743100 ಮೊಬೈಲ್ ಸಂಖ್ಯೆಗೆ ವಾಟ್ಸಪ್ ಮೂಲಕವೂ ಕಳುಹಿಸಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.



















