ಸುದ್ದಿಒನ್, ಚಿತ್ರದುರ್ಗ, ಮೇ. 03 : ಜಿಲ್ಲಾ ವಕೀಲರ ಸಂಘದ ವತಿಯಿಂದ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶನಿವಾರ ಸಂಜೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ ಅವರು ನವೀಕೃತ ನ್ಯಾಯಾಂಗ ವೇದಿಕೆಯ ಉದ್ಘಾಟನೆ ನೆರವೇರಿಸಿದರು.
ಇದೇ ವೇಳೆ ವರ್ಗಾವಣೆಗೊಂಡಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ, ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ನ್ಯಾಯಾಧೀಶರಾದ ಎ.ಎಂ. ಚೈತ್ರ ಹಾಗೂ ಉಜ್ಜಲ್ ವೀರಣ್ಣ ಸಿದ್ದಣ್ಣನವರ್ ಸೇರಿದಂತೆ ನಾಲ್ವರು ನ್ಯಾಯಾಧೀಶರನ್ನು ವಕೀಲರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್. ಮಹೇಶ್ವರಪ್ಪ, ಪ್ರಧಾನ ಕಾರ್ಯದರ್ಶಿ ಹೆಚ್. ಓ. ಜಗದೀಶ ಗುಂಡೇರಿ ಸೇರಿದಂತೆ ಜಿಲ್ಲಾ ನ್ಯಾಯಾಲಯದ ಇತರೆ ನ್ಯಾಯಾಧೀಶರು, ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ವಕೀಲರು ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











