Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಶಿವಪ್ರಕಾಶ್‌ಗೆ ‘ಕರ್ನಾಟಕ ಕಲಾಶ್ರಿ’ ಪ್ರಶಸ್ತಿ: ನೃತ್ಯ ಕ್ಷೇತ್ರದ ಸಾಧನೆಗೆ ಗೌರವ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 03 : ಚಿತ್ರದುರ್ಗದ ಅಂಜನಾ ನೃತ್ಯ ಕಲಾ ಕೇಂದ್ರದ ವಿದ್ವಾನ್ ಸಿ.ಆರ್.ಶಿವಪ್ರಕಾಶ್‍ರವರ ಕಲಾ ಸೇವೆಯನ್ನು ಗುರುತಿಸಿ ಕರ್ನಾಟಕ ಸಂಗಿತ ನೃತ್ಯ ಅಕಾಡೆಮಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಕರ್ನಾಟಕ ಕಲಾಶ್ರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 

ಭರತನಾಟ್ಯ ಕ್ಷೇತ್ರದಲ್ಲಿ ಕಳೆದ 42 ವರ್ಷಗಳಿಂದಲೂ ಅಪ್ರತಿಮೆ ಸಾಧನೆಗೈಯುವ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ನೃತ್ಯ ತರಬೇತಿ ನೀಡಿ ಜಾಗತಿಕ ಮಟ್ಟಕ್ಕೆ ನೃತ್ಯ ಕಲೆಯನ್ನು ಕೊಂಡೊಯ್ದಿರುವ ಸಿ.ಆರ್.ಶಿವಪ್ರಕಾಶ್‍ರವರಲ್ಲಿರುವ ಅಮೋಘ ಪ್ರತಿಭೆಯನ್ನು ಗುರುತಿಸಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧಕರುಗಳನ್ನು ಸನ್ಮಾನಿಸಲಾಯಿತು.

ಎನ್.ನರೇಂದ್ರಬಾಬು, ಕೆ.ವಿ.ನಾಗರಾಜಮೂರ್ತಿ, ಮಾನಸ ಬಿ.ಎಸ್. ಮಂಜುನಾಥಸ್ವಾಮಿ, ಬಲವಂತರಾವ್‍ಪಾಟೀಲ್, ಕಿರಣ್‍ಸಿಂಗ್ ಹಾಗೂ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷೆ ಶುಭ ಧನಂಜಯ್ ಇವರುಗಳು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...