ಬೆಂಗಳೂರು: ಮೇ 9ರ ತನಕವೂ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ. ಹೀಗಾಗಿ ಜನರು ಕೂಡ ಮುನ್ನೆಚ್ಚರಿಕೆಯಿಂದ ಇರಬೇಕಾಗುತ್ತದೆ. ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆ ಬೀಳಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಬಾಗಲಕೋಟೆ, ಗದಗ, ಹಾವೇರಿ, ವಿಜಯಪುರ, ಬೆಳಗಾವಿ, ಬೀದರ್, ಧಾರವಾಡ, ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಎರಡು ದಿನ ಒಣ ಹವೆ ಇರಲಿದೆ. ಹಾಗೇ ಕೊಪ್ಪಳ, ಯಾದಗಿರಿ, ರಾಯಚೂರು, ಕಲಬುರಗಿ, ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.

ಈಗಾಗಲೇ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದಾನೂ ಮಳೆಯಾಗುತ್ತಿದೆ. ಮುಂದಿನ ಒಂದು ವಾರವೂ ಮಳೆಯ ಸೂಚನೆ ನೀಡಿರುವ ಕಾರಣ, ಜನ ಕೂಡ ಎಚ್ಚರಿಕೆಯಿಂದ ಇರಬೇಕಾಗಿದೆ.


















