Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಂಚ ರಾಜ್ಯಗಳ ಚುನಾವಣೆ: ಪಶ್ಚಿಮ ಬಂಗಾಳದಲ್ಲಿ ಕಠಿಣ ಪೈಪೋಟಿ, ಇತರ ರಾಜ್ಯಗಳಲ್ಲಿ ಮೈತ್ರಿಗಳ ಮುನ್ನಡೆ

---Advertisement---

ಸುದ್ದಿಒನ್ : ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ರಾಜ್ಯದ 294 ವಿಧಾನಸಭಾ ಸ್ಥಾನಗಳಲ್ಲಿ ಒಂದಕ್ಕೆ ಮರು ಮತದಾನ ನಡೆಯಲಿದ್ದು, ಉಳಿದ 293 ಸ್ಥಾನಗಳಿಗೆ ಮತ ಎಣಿಕೆ ಮುಂದುವರೆದಿದೆ. ಆರಂಭಿಕ ಮತೆ ಎಣಿಕೆಯಲ್ಲಿ, ಬಿಜೆಪಿ ಸ್ವಲ್ಪ ಮುನ್ನಡೆ ಸಾಧಿಸಿದೆ. ಬಿಜೆಪಿ 158 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಆಡಳಿತಾರೂಢ ಟಿಎಂಸಿ 118 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಕೇವಲ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮಧ್ಯೆ, ಭವಾನಿಪುರದಲ್ಲಿ ಸುವೇಂದು ಅಧಿಕಾರಿ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗಿಂತ ಮುಂದಿದ್ದಾರೆ. ನಂದಿಗ್ರಾಮದಲ್ಲಿಯೂ ಸುವೇಂದು ಅಧಿಕಾರಿ ಮುನ್ನಡೆಯಲ್ಲಿದ್ದಾರೆ.

 

ತಮಿಳುನಾಡಿನಲ್ಲಿ ಡಿಎಂಕೆ, ಅಸ್ಸಾಂನಲ್ಲಿ ಬಿಜೆಪಿ, ಕೇರಳದಲ್ಲಿ ಯುಡಿಎಫ್ ಮುನ್ನಡೆ :

ತಮಿಳುನಾಡಿನ ಒಟ್ಟು 234 ವಿಧಾನಸಭಾ ಸ್ಥಾನಗಳಲ್ಲಿ ಇಲ್ಲಿಯವರೆಗೆ ಬಂದಿರುವ ಮಾಹಿತಿಯ ಪ್ರಕಾರ, ವಿಜಯ್ ನೇತೃತ್ವದ ಟಿವಿಕೆ 82 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಎಐಎಡಿಎಂಕೆ ಮೈತ್ರಿಕೂಟ 64 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಡಿಎಂಕೆ ಮೈತ್ರಿಕೂಟ 52 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

ಕೇರಳ :
ಇಲ್ಲಿಯವರೆಗೆ ಬಂದಿರುವ ಮಾಹಿತಿಯ ಪ್ರಕಾರ, ಕೇರಳದ ಒಟ್ಟು 140 ಸ್ಥಾನಗಳಲ್ಲಿ ಯುಡಿಎಫ್ ಮೈತ್ರಿಕೂಟ 99 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎಲ್‌ಡಿಎಫ್ ಮೈತ್ರಿಕೂಟ 36 ಸ್ಥಾನಗಳಲ್ಲಿ ಮತ್ತು ಬಿಜೆಪಿ ಮೈತ್ರಿಕೂಟ 5 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

 

ಅಸ್ಸಾಂನ ಒಟ್ಟು 126 ಸ್ಥಾನಗಳಲ್ಲಿ, ಆಡಳಿತಾರೂಢ ಬಿಜೆಪಿ ಮೈತ್ರಿಕೂಟ 80 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಕಾಂಗ್ರೆಸ್ ಮೈತ್ರಿಕೂಟ 26 ಸ್ಥಾನಗಳಲ್ಲಿ, ಎಐಯುಡಿಎಫ್ 1 ಸ್ಥಾನದಲ್ಲಿ ಮತ್ತು ಇತರರು 1 ಸ್ಥಾನದಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ.

 

ಪುದುಚೇರಿಯಲ್ಲಿ ಬಿಜೆಪಿ ಮೈತ್ರಿಕೂಟ 22 ಸ್ಥಾನಗಳಲ್ಲಿ, ಕಾಂಗ್ರೆಸ್ ಮೈತ್ರಿಕೂಟ 6 ಸ್ಥಾನಗಳಲ್ಲಿ ಮತ್ತು ಇತರರು ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...