ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಬಿಜೆಪಿಯ ಡಿ.ಎನ್. ಜೀವರಾಜ್ ಅವರು ನೂತನ ಶಾಸಕರಾಗಿ ಅಧಿಕೃತವಾಗಿ ಘೋಷಿತರಾಗಿದ್ದಾರೆ. ಚುನಾವಣಾ ಆಯೋಗದ ಅನುಮೋದನೆಯೊಂದಿಗೆ ಕ್ಷೇತ್ರದ ಚುನಾವಣಾಧಿಕಾರಿಗಳು ಜೀವರಾಜ್ ಅವರಿಗೆ ವಿಜಯ ಪ್ರಮಾಣಪತ್ರ ಹಸ್ತಾಂತರಿಸಿದ್ದಾರೆ.ಶನಿವಾರ ನಡೆದ ಅಂಚೆ ಮತಗಳ ಮರುಎಣಿಕೆಯಲ್ಲಿ ಜೀವರಾಜ್ ಅವರು ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡರಿಗಿಂತ 55 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದರು. ಆದರೆ ಆ ದಿನ ಅಂತಿಮ ಘೋಷಣೆ ಮಾಡಲಾಗದೆ, ವರದಿಯನ್ನು ಚುನಾವಣಾ ಆಯೋಗ ಹಾಗೂ ಹೈಕೋರ್ಟ್‌ಗೆ ಸಲ್ಲಿಸಲಾಗಿತ್ತು. ಬಳಿಕ ಭಾನುವಾರ ತಡರಾತ್ರಿ ಅಧಿಕಾರಿಗಳು ಅಧಿಕೃತ ಘೋಷಣೆ ಮಾಡಿದರು.
2023ರ ವಿಧಾನಸಭಾ ಚುನಾವಣೆಯಲ್ಲಿ ಟಿ.ಡಿ. ರಾಜೇಗೌಡರು ಕೇವಲ 201 ಮತಗಳ ಅಂತರದಲ್ಲಿ ಗೆಲುವು ಸಾಧಿಸಿ ಶಾಸಕರಾಗಿದ್ದರು. ಈ ಫಲಿತಾಂಶ ಪ್ರಶ್ನಿಸಿ ಡಿ.ಎನ್. ಜೀವರಾಜ್ ಅವರು ಅಂಚೆ ಮತಗಳ ಮರುಎಣಿಕೆಗೆ ನ್ಯಾಯಾಲಯದ ಮೊರೆ ಹೋಗಿದ್ದರು. ಮೂರು ವರ್ಷಗಳ ಬಳಿಕ ಹೈಕೋರ್ಟ್ ಮರುಎಣಿಕೆಗೆ ಆದೇಶ ನೀಡಿದ್ದು, ಮೇ 2ರಂದು ಚಿಕ್ಕಮಗಳೂರು ಐಡಿಎಸ್‌ಜಿ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಿತು.ಮರುಎಣಿಕೆಯ ವೇಳೆ ರಾಜೇಗೌಡರಿಗೆ ಬಂದಿದ್ದ 255 ಅಂಚೆ ಮತಗಳು ತಿರಸ್ಕೃತಗೊಂಡಿದ್ದು, ಅಂತಿಮ ಫಲಿತಾಂಶದಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಯಿತು. ಇದರೊಂದಿಗೆ ಜೀವರಾಜ್ ಅವರಿಗೆ ಸ್ಪಷ್ಟ ಮುನ್ನಡೆ ದೊರಕಿತು.
ಈ ಬೆಳವಣಿಗೆಯಿಂದ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ಬಿದ್ದಿದ್ದು, ಬಿಜೆಪಿ ಒಂದು ಸ್ಥಾನ ಹೆಚ್ಚಿಸಿಕೊಂಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ರಾಜಕೀಯ ಸಮೀಕರಣದಲ್ಲಿ ಬದಲಾವಣೆ ಉಂಟಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.ಈ ಅಚ್ಚರಿಯ ಫಲಿತಾಂಶ ಕಾಂಗ್ರೆಸ್ ವಲಯಕ್ಕೆ ಶಾಕ್ ನೀಡಿದ್ದು, ಟಿ.ಡಿ. ರಾಜೇಗೌಡರ ಮುಂದಿನ ರಾಜಕೀಯ ನಡೆ ಏನಾಗಲಿದೆ ಎಂಬುದರ ಮೇಲೆ ಇದೀಗ ಎಲ್ಲರ ಗಮನ ನೆಟ್ಟಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















