Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಶ್ಚಿಮಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಗೆಲುವು : ಚಿತ್ರದುರ್ಗದಲ್ಲಿ ಬಿಜೆಪಿ ಸಂಭ್ರಮಾಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮೇ. 04 : ದೇಶದ ಪಂಚ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಪಶ್ಚಿಮಬಂಗಾಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಗೆಲುವು ಸಾಧಿಸಿದ್ದಕ್ಕೆ ಚಿತ್ರದುರ್ಗ ಜಿಲ್ಲಾ ಬಿಜೆಪಿ ಘಟಕದವತಿ ಯಿಂದ ಸೋಮವಾರ ಸಂಜೆ ಮದಕರಿ ವೃತ್ತದಲ್ಲಿ ಸಂಭ್ರಮೋತ್ಸವನ್ನು ಆಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿ ಪಕ್ಷ ಕಾರ್ಯಕರ್ತರು ಗೆಲುವಿನ ಹರ್ಷವನ್ನು ವ್ಯಕ್ತಪಡಿಸುತ್ತಾ ಮೋದಿಯವರ ಪರವಾಗಿ ಜಯಕಾರವನ್ನು ಹಾಕಿದರು. ಪಟಾಕಿಯನ್ನು ಸಿಡಿಸಿ ಸಿಹಿಯನ್ನು ಹಂಚುವುದರ ಮೂಲಕ ಚುನಾವಣೆಯ ಗೆಲುವನ್ನು ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಇತ್ತೀಚೆಗೆ ದೇಶದ ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣಾ ಫಲಿತಾಂಶಗಳ ಕುರಿತು ಹರ್ಷ ವ್ಯಕ್ತಪಡಿಸಿ  ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಶ್ರಮಕ್ಕೆ ತಕ್ಕ ಗೆಲುವು ಸಿಕ್ಕಿದೆ ಎಂದು ವಿಶ್ವಾಸ ವ್ಯಕ್ತಪಡಿಸಿ, ಬಂಗಾಳದಲ್ಲಿ ಈವರೆಗೆ ಹಿಂದೂ ವಿರೋಧಿ ಸರ್ಕಾರ ಅಸ್ತಿತ್ವದಲ್ಲಿತ್ತು. ಅಲ್ಲಿನ ಮತದಾರರು, ವಿಶೇಷವಾಗಿ ಹಿಂದೂಗಳು ಅನುಭವಿಸಿದ ದಬ್ಬಾಳಿಕೆ ಮತ್ತು ಸರ್ಕಾರದ ಆಡಳಿತ ವೈಖರಿಗೆ ಬೇಸತ್ತು ಈ ಬಾರಿ ಬಿಜೆಪಿಯನ್ನು ದೊಡ್ಡ ಪ್ರಮಾಣದಲ್ಲಿ ಬೆಂಬಲಿಸಿದ್ದಾರೆ. ಅಲ್ಲಿನ ಆಡಳಿತಕ್ಕೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದು ಹೇಳಿದರು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಳೆದ ಎರಡು ಅವಧಿಯಲ್ಲಿ ನೀಡಿದ ಜನಪರ ಆಡಳಿತವನ್ನು ಮೆಚ್ಚಿ, ಜನರು ಈ ಬಾರಿಯೂ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಈ ಮೂಲಕ ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧಿಸಿದೆ ಎಂದ ಅವರು. ಪುದುಚೇರಿಯಲ್ಲಿ ಎನ್‍ಡಿಎ ಮೃತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಜಗತ್ತಿನ ಅತೀ ದೊಡ್ಡ ಪಕ್ಷವಾದ ಬಿಜೆಪಿ, ಕಾರ್ಯಕರ್ತರ ಗೆಲುವಿನ ಮೂಲಕ ದೇಶದ ಅಭಿವೃದ್ಧಿಗೆ ಹೊಸ ಭಾಷ್ಯ ಬರೆಯಲಿದೆ ಎಂದು ತಿಳಿಸಿದರು.

ಈ ಸಂದರ್ಬದಲ್ಲಿ ಮಾಜಿ ಶಾಸಕರಾದ ಎ.ಎಸ್.ಪಾಟೀಲ್ ರಾಜ್ಯ ಓಬಿಸಿ ಅಧ್ಯಕ್ಷರಾದ ರಘು ಕೌಟಿಲ್ಯ, ರಾಜ್ಯ ಉಪಾಧ್ಯಕ್ಷರಾದ ಆಶ್ವಿನಿ ಶಂಕರ್, ಜಿಲ್ಲಾ ಉಪಾಧ್ಯಕ್ಷರಾದ ಡಾ.ಸಿದ್ದಾರ್ಥ ಗುಡಾರ್ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧುರಿ ಗೀರಿಶ್, ಮೋಹನ್ ಕುಮಾರ್ ವೆಂಕಟೇಶ್ ಯಾದವ್, ನಗರಾಧ್ಯಕ್ಷ ಲೋಕೇಶ್ ಜಿ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಸೌಭಾಗ್ಯ ಬಸವರಾಜನ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ರೈತ ಮೋರ್ಚಾದ ಕಾರ್ಯದರ್ಶಿ ಮಲ್ಲಿಕಾರ್ಜನ್, ನಗರಸಭೆಯ ಮಾಜಿ ಸದಸ್ಯ ಸುರೇಶ್, ಹರೀಶ್, ಕಾರ್ಯಕರ್ತರಾದ ರಾಜೇಶ್ ರೇಖಾ, ರಜನಿ,ಬಸಮ್ಮ, ರೈತವ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಭಾರತಿ ಮಲ್ಲಿಕಾರ್ಜನ್, ಶ್ಯಾಮಲ ಶಿವಪ್ರಕಾಶ್, ಶೈಲಜಾ ರೆಡ್ಡಿ, ಭಾರ್ಗವಿ ದ್ರಾವಿಡ್, ವಕ್ತಾರ ನಾಗರಾಜ್ ಬೇದ್ರೇ, ದಗ್ಗೆ ಶಿವಪ್ರಕಾಶ್, ಯಶವಂತ ಸೇರಿದಂತೆ ಇತರರು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now