Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿಕ್ಕಮಗಳೂರು ರಾಜೇಗೌಡ ಪ್ರಕರಣ : ಕಾನೂನು ಸಮರದ ಬಗ್ಗೆ ಮಾತನ್ನಾಡಿದ ಸಿಎಂ ಸಿದ್ದರಾಮಯ್ಯ

---Advertisement---

 

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಏಣಿಕೆಯಲ್ಲಿ ಬಿಜೆಪಿಗೆ ಜಯ ಸಿಕ್ಕಿದೆ. ಈ ಸಂಬಂಧ ಸಿದ್ದರಾಮಯ್ಯ ಅವರು ದೊಡ್ಡ ಅಕ್ರಮ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಇದು ಕೇವಲ ಮತಗಳ ಕಳ್ಳತನ ಮಾಡಿಲ್ಲ, ಇದು ಮತಗಳ ಮೇಲೆ ನಡೆದ ವ್ಯವಸ್ಥಿತ ಡಕಾಯಿತಿ ಎಂದು ಕಿಡಿಕಾರಿದ್ದಾರೆ. ರಾಜೇಗೌಡ ಅವರಿಗೆ ಇದ್ದ 250 ಮತಗಳನ್ನು ವ್ಯವಸ್ಥಿತವಾಗಿ ತಿದ್ಧಲಾಗಿದೆ ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ.

ಇದು ವೋಟ್ ಚೋರಿ ಅಲ್ಲ ವೋಟ್ ಡಕಾಯಿತಿ. ಚುನಾವಣಾ ಏಜೆಂಟ್ ಗಳು ಮತ್ತು ರಿಟರ್ನಿಂಗ್ ಆಫೀಸರ್ ಗಳು ಘೋಷಣೆ .ಅಡಿದ್ದ ಫಲಿತಾಂಶವನ್ನು ಈಗ ಬದಲಾಯಿಸಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ದ್ರೋಹವಾಗಿದೆ. ಚುನಾವಣಾ ಅಬ್ಸರ್ವರ್ ಗಳು ಕ್ಲಿಯರೆನ್ಸ್ ಸಿಗುವ ಮೊದಲೇ, ಫಲಿತಾಂಶ ಆತುರಾತುರವಾಗಿ ಘೋಷಿಸಿರುವುದು ಸರಿಯಲ್ಲ. ಚುನಾವಣಾ ಆಯೋಗವೂ ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಬೇಕು. ಆದರೆ ಇಲ್ಲಿ ನೀತಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಎಫ್ಐಆರ್ ದಾಖಲಾಗಿದ್ದು, ಕಾಂಗ್ರೆಸ್ ಪಕ್ಷವೂ ಇದನ್ನು ನ್ಯಾಯಾಲಯದಲ್ಲಿ ಚಾಲೆಂಜ್ ಮಾಡಲಿದೆ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.

ಶೃಂಗೇರಿ ಚುನಾವಣಾ ಫಲಿತಾಂಶದ ನಂತರ ಬಿಜೆಪಿ ಅಭ್ಯರ್ಥಿ ಜೀವರಾಜ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಅಂಚೆ ಮತಗಳ ಮರು ಎಣಿಕೆಯಲ್ಲಿ ಮೋಸ ನಡೆದಿದೆ, ಮರು ಎಣಿಕೆ ಮಾಡಬೇಕೆಂದು ಕೋರಿದ್ದರು. ಈ ಅರ್ಜಿ ಪುರಸ್ಕರಿಸಿದ ಕೋರ್ಟ್, ಅಂಚೆ ಮತಗಳ ಮರು ಎಣಿಕೆಗೆ ಸೂಚನೆ ನೀಡಿತ್ತು. ರಾಜೇಗೌಡ ಅವರಿಗೆ 569 ಮತಗಳು ಲಭಿಸಿದ್ದವು‌. ಈ ಸಂಬಂಧ ಮತಗಳು ಅಮಾನ್ಯವಾವಿದ್ದು ಹೇಗೆ ಎಂಬ ಪ್ರಶ್ನೆಯನ್ನ ಕೇಳಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now