Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪುಸ್ತಕ ಓದದ ಯುವಜನತೆ: ಸಾಮಾಜಿಕ ಜಾಲತಾಣಗಳ ನಡುವೆ ಕನ್ನಡ ಸಂಸ್ಕೃತಿ ಉಳಿಸಲು ಎಂ.ಕೆ.ದೇವಪ್ಪ ಕರೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಮೇ. 05 : ಪುಸ್ತಕ ಓದುವ ಸಂಸ್ಕೃತಿ ಅಳಿಸಿ ಹೋಗುತ್ತಿದೆ. ಸಾಮಾಜಿಕ ಜಾಲತಾಣಗಳ ಹಾವಳಿ ಹೆಚ್ಚುತ್ತಿದ್ದೆ ಎಂದು ಎಚ್ ಪಿಪಿಸಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎಂ.ಕೆ.ದೇವಪ್ಪ ಹೇಳಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಎಚ್ ಪಿಪಿಸಿ ಸರ್ಕಾರಿ ಪ್ರಧಮ ದರ್ಜೆ ಕಾಲೇಜು ಇವರ ವತಿಯಿಂದ ನಗರದ ಎಚ್ ಪಿಪಿಸಿ ಪ್ರಥಮ ದರ್ಜೆ ಕಾಲೇಜಿಲ್ಲಿ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರೆವೇರಿಸಿ ಅವರು ಮಾತನಾಡಿ, ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲಾರ ಎನ್ನುವ ಡಾ.ಬಿಆರ್.ಅಂಬೇಡ್ಕರ್ ರವರ ನುಡಿಯಂತೆ ಕನ್ನಡ ಮರೆಯಬಾರದು.ಕನ್ನಡ ಕಲಿಕೆಗೆ ಹೆಚ್ಚು‌ ಪ್ರಾಧಾನ್ಯತೆ ನೀಡಬೇಕು,ಇತ್ತೀಚಿನ ದಿನಗಳಲ್ಲಿಶಾಲೆಗಳಲ್ಲಿ‌ ಆಂಗ್ಲ ಭಾಷಗೆ‌ ಹೆಚ್ಚು ಒತ್ತು ನೀಡಲಾಗುತ್ತಿದ್ದೆ.ಪರಭಾಷಗಳ ಹಾವಳಿಯಲ್ಲಿ ಕನ್ನಡ ಅಳಿದು ಹೋಗುತ್ತಿದ್ದೆ‌ ಬೇರೆ ಬಾಷೆಗಳ ವ್ಯಾಮೋಹ ಬಿಡಬೇಕು.ಕನ್ನಡ. ನಾಡುನುಡಿ ಕೇವಲ ನವೆಂಬರ್ ಗೆ ಸೀಮಿತ ವಾಗಬಾರದು.ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಇಂದಿನ ಯುವ ಪೀಳಿಗೆ ಪುಸ್ತಕಗಳನ್ನ ಓದವ ಹವ್ಯಾಸ ಬೆಳಸಿಕೊಳ್ಳಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ತನ ತಾಲ್ಲೂಕು ಅಧ್ಯಕ್ಷ ಜಿಟಿ.ವಿರಭದ್ರಸ್ವಾಮಿ ಮಾತನಾಡಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಅಭಿವೃದ್ಧಿಗಾಗಿ ಈ ಸಂಸ್ಥೆಯನ್ನು ಸ್ಥಾಪಿಸಲಾಯಿತು. ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಅವರ ಪ್ರೋತ್ಸಾಹದೊಂದಿಗೆ, ಹೆಚ್.ವಿ. ನಂಜುಂಡಯ್ಯ ಅವರು ಪರಿಷತ್ತಿನ ಮೊದಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಕನ್ನಡ ನಾಡು ನುಡಿ ಭಾಷೆ ಉಳಿವಿಗಾಗಿ ಇಂದಿನ ಯುವ ಜನತೆ ಎಚ್ಚೆತ್ತುಕೊಳ್ಳಬೇಕು.
ಕನ್ನಡ ಉಳಿವಿಗಾಗಿ ತಾಲೂಕಿನಲ್ಲಿ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಲಾಗಿತ್ತು ಸದ್ಯದ ಒಂದು ಆರು ತಿಂಗಳ ಯಾವುದೇ ಕಾರ್ಯ ಚಟುವಟಿಕೆ ನಡೆಸಿದ ಕಾರಣ ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಕನ್ನಡ ಉಳಿವಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಪ್ರತಿಯೊಬ್ಬರೂ ಕನ್ನಡದ ಬಗ್ಗೆ ಆತ್ಮಭಿಮಾನ ಹೊಂದಬೇಕು.. ಶಾಲಾ ಕಾಲೇಜುಗಳಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು ಎಂದರು.

 

ಉಪನ್ಯಾಸಕ ಜಗನ್ನಾಥ , ನೃತ್ಯಾನಿಕೇತ ಸಂಸ್ಥೆ ಯ ವಿಷ್ಣುಮೂರ್ತಿ ರಾವ್ ಕನ್ನಡ ಸಂಸ್ಥಾಪನೆಯ ದಿನ ಕುರಿತು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಮಂಜುನಾಥ್ ಖಜಾಂಚಿ ಜಗನಾಥ್, ಈರಣ್ಣ ಮೃತ್ಯುಂಜಯ ಕನ್ನಡ ರಕ್ಷಣಾ ವೇದಿಕೆಯ ಮಂಜುನಾಥ್ ಸೇರಿದಂತೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.
.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now