ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಚಿತ್ರದುರ್ಗ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಹಿರೇಗುಂಟನೂರು, ಭೀಮಸಮುದ್ರ, ಕುರುಬರಹಳ್ಳಿ, ವಿ.ಪಾಳ್ಯ, ಕೊಡಗವಲ್ಲಿ, ಬೊಮ್ಮನಹಳ್ಳಿ ಪ್ರತಿಯೊಂದು ವಲಯ ಮಟ್ಟದಲ್ಲಿ ನಾಲ್ಕರಿಂದ ಐದು ಸಾಮಾನ್ಯ ಸೇವಾ ಕೇಂದ್ರ ತೆರೆಯಲಾಯಿತು.
ತಾಲ್ಲೂಕು ಯೋಜನಾಧಿಕಾರಿ ಪ್ರವೀಣ್ ಎ.ಜೆ. ಹಿರೇಗುಂಟನೂರಿನಲ್ಲಿ ಸಾಮಾನ್ಯ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡುತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸವಲತ್ತುಗಳು ಜನ ಸಾಮಾನ್ಯರಿಗೆ ಒಂದೆ ಕಡೆ ಸಿಗುವಂತಾಗಲಿ ಎನ್ನುವ ಉದ್ದೇಶದಿಂದ ರಾಜ್ಯಾದ್ಯಂತ ಸುಮಾರು ಹತ್ತು ಸಾವಿರ ಸಾಮಾನ್ಯ ಸೇವಾ ಕೇಂದ್ರಗಳು ಪ್ರಾರಂಭವಾಗಿವೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಸರ್ಕಾರದಿಂದ ಸೌಲಭ್ಯಗಳನ್ನು ಪಡೆಯುವುದರ ಜೊತೆಗೆ ಸಮಯ ಹಾಗೂ ಹಣ ಉಳಿತಾಯವಾಗಲಿದೆ ಎಂದು ಹೇಳಿದರು.
ಮೇಲ್ವಿಚಾರಕ ಚಂದ್ರಶೇಖರ್, ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್, ಎಸ್.ಡಿ.ಎಂ.ಸಿ.ಅಧ್ಯಕ್ಷೆ ಶ್ರೀಮತಿ ಸುದಮ್ಮ, ಒಕ್ಕೂಟದ ಅಧ್ಯಕ್ಷೆ ಸುನಿತ, ಸೇವಾ ಪ್ರತಿನಿಧಿಗಳಾದ ಮಂಜುಳ, ಮಹಾಲಿಂಗಮ್ಮ, ಗ್ರಾಮದ ಮುಖಂಡರುಗಳು ಭಾಗವಹಿಸಿದ್ದರು.