Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಾತಿ ನಿಂದನೆ ಆರೋಪ : ಬಿಜೆಪಿ ಶಾಸಕ ಬಿ.ಪಿ.ಹರೀಶ್‌ ಗೆ ಕೋರ್ಟ್ ನಿಂದ ಅರೆಸ್ಟ್ ವಾರೆಂಟ್ ಜಾರಿ

---Advertisement---

 

ಬೆಂಗಳೂರು: ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅರೆಸ್ಟ್ ವಾರೆಂಟ್ (ಬಂಧನ ಆಜ್ಞೆ) ಜಾರಿ ಮಾಡಿದೆ.

ಪ್ರಕರಣದ ಹಿನ್ನೆಲೆ :
2023ರ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ನಂತರ, ತಮಗೆ ಅಭಿನಂದನೆ ಸಲ್ಲಿಸಲು ಬಂದಿದ್ದ ಸಂದರ್ಭದಲ್ಲಿ ಶಾಸಕ ಹರೀಶ್ ಅವರು ದಲಿತ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹೇಳಿಕೆಯನ್ನು ಖಂಡಿಸಿ ಬಿಎಸ್ಪಿ ಮುಖಂಡ ಹನುಮಂತಪ್ಪ ಎಂಬುವವರು ಹರಿಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ಶಾಸಕರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು.

ನ್ಯಾಯಾಲಯದ ಆದೇಶ :

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯವು ಈ ಹಿಂದೆ ಹಲವಾರು ಬಾರಿ ಸೂಚನೆ ನೀಡಿತ್ತು. ಆದರೂ ಶಾಸಕರು ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಈಗ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಮೇ 7ರೊಳಗೆ ಶಾಸಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now