ಬೆಂಗಳೂರು: ರಾಜ್ಯದಲ್ಲಿ ಸುಡುತ್ತಿರುವ ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನತೆಗೆ ಹವಾಮಾನ ಇಲಾಖೆ ತಂಪು ಸುದ್ದಿಯೊಂದನ್ನು ನೀಡಿದೆ. ಇಂದಿನಿಂದ ಮುಂದಿನ ಏಳು ದಿನಗಳ ಕಾಲ ಕರ್ನಾಟಕದಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರಲ್ಲಿ ವರುಣನ ಆರ್ಭಟ :
ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಒಂದು ವಾರ ಸಂಜೆಯ ನಂತರ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವವಿದೆ. ಈಗಾಗಲೇ ನಗರದ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡು ಮತ್ತು ಮಲೆನಾಡಿನಲ್ಲಿ ಮಳೆ ಅಬ್ಬರ :
ಕೇವಲ ಬೆಂಗಳೂರು ಮಾತ್ರವಲ್ಲದೆ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಮಂಡ್ಯ, ಹಾಸನ ಮತ್ತು ರಾಮನಗರದಲ್ಲಿ ವರುಣನ ಅಬ್ಬರ ಜೋರಾಗಿರಲಿದೆ. ಮಲೆನಾಡಿನ ಭಾಗಗಳಾದ ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಗಿರಿಧಾಮಗಳಿಗೆ ಭೇಟಿ ನೀಡುವ ಪ್ರವಾಸಿಗರು ಜಾಗರೂಕರಾಗಿರುವುದು ಉತ್ತಮ.
ಕರಾವಳಿ ಮತ್ತು ಉತ್ತರ ಒಳನಾಡು :
ಕರಾವಳಿ: ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲಿದ್ದರೂ ಸಂಜೆ ವೇಳೆಗೆ ಮೋಡ ಕವಿಯಲಿದೆ.

ಉತ್ತರ ಒಳನಾಡು: ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸದ್ಯಕ್ಕೆ ಬಿಸಿಲು ಮುಂದುವರಿಯಲಿದ್ದು, ಮೇ 7ರಂದು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















