Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

“ಇರು ಅಂದ್ರೆ ಇರ್ತೀನಿ, ಬಿಡು ಅಂದ್ರೆ ಬಿಡ್ತೀನಿ”: CM ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ!

---Advertisement---

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಆಗಾಗ್ಗೆ ಮುನ್ನೆಲೆಗೆ ಬರುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. “ನನ್ನ ಅಧಿಕಾರದ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ,” ಎಂದು ಹೇಳುವ ಮೂಲಕ ಅವರು ಚೆಂಡನ್ನು ದೆಹಲಿ ನಾಯಕರ ಅಂಗಳಕ್ಕೆ ಎಸೆದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಆದರೆ, ಮುಖ್ಯಮಂತ್ರಿಯಾಗಿ ನಾನು ಮುಂದುವರಿಯುವ ಬಗ್ಗೆ ಹೈಕಮಾಂಡ್ ಏನು ಹೇಳುತ್ತದೋ ಅದಕ್ಕೆ ನಾನು ಬದ್ಧ. ಅವರು ‘ಇರು’ ಎಂದರೆ ಇರುತ್ತೇನೆ, ‘ಬಿಡು’ ಎಂದರೆ ಬಿಡುತ್ತೇನೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದ್ದಾರೆ.

ಸಂಪುಟ ಪುನರಚನೆಯ ಕುರಿತು ದೆಹಲಿಗೆ ತೆರಳುವ ಬಗ್ಗೆ ಮಾತನಾಡಿದ ಅವರು, ಇದುವರೆಗೆ ನಾನು ಹೈಕಮಾಂಡ್‌ನಿಂದ ಯಾವುದೇ ಅಪಾಯಿಂಟ್‌ಮೆಂಟ್ ಕೇಳಿಲ್ಲ. ಒಂದು ವೇಳೆ ರಾಹುಲ್ ಗಾಂಧಿ ಅವರು ಸಮಯ ನೀಡಿದರೆ ಅಥವಾ ಹೈಕಮಾಂಡ್ ಕರೆದರೆ ಖಂಡಿತವಾಗಿಯೂ ದೆಹಲಿಗೆ ಹೋಗುತ್ತೇನೆ. ಅಲ್ಲಿ ಸಂಪುಟ ಪುನರಚನೆ ಸೇರಿದಂತೆ ರಾಜ್ಯದ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚಿಸುತ್ತೇನೆ ಎಂದರು.

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...