Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಬ್ಬು ಬೆಳೆಗಾರರಿಗೆ ಕೇಂದ್ರದ ಸಿಹಿ ಸುದ್ದಿ: ಲಕ್ಷಾಂತರ ರೈತರಿಗೆ ಲಾಭ

---Advertisement---

ಕರ್ನಾಟಕದ ಸೂರ್ಯಕಾಂತಿ ಬೆಳೆಗಾರರಿಗೆ ಬೆಂಬಲ ನೀಡಿದ ಬಳಿಕ ಇದೀಗ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೂ ಮಹತ್ವದ ನೆರವು ಘೋಷಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ 2026-27ನೇ ಹಂಗಾಮಿಗೆ ಕಬ್ಬಿನ ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆ (FRP)ಯನ್ನು ಪ್ರತಿ ಕ್ವಿಂಟಲ್‌ಗೆ ₹365ಕ್ಕೆ ನಿಗದಿ ಮಾಡಿದೆ. ಇದು ಶೇ.10.25 ರಿಕವರಿ ದರದ ಆಧಾರದ ಮೇಲೆ ನಿರ್ಧರಿಸಲಾಗಿದ್ದು, ಕರ್ನಾಟಕದ ಸುಮಾರು 8ರಿಂದ 10 ಲಕ್ಷ ರೈತರಿಗೆ ನೇರ ಲಾಭವಾಗಲಿದೆ.

ಇದಲ್ಲದೆ, ರಿಕವರಿ ಪ್ರಮಾಣದಲ್ಲಿ 0.1% ಏರಿಕೆಗೆ ಪ್ರತಿ ಕ್ವಿಂಟಲ್‌ಗೆ ₹3.56 ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುತ್ತದೆ. ರಿಕವರಿ ಪ್ರಮಾಣ 9.5% ಅಥವಾ ಅದಕ್ಕಿಂತ ಕಡಿಮೆ ಇದ್ದರೂ ಯಾವುದೇ ಕಡಿತವಿಲ್ಲದೆ ಕನಿಷ್ಠ ₹338.3 ಬೆಂಬಲ ಬೆಲೆ ನಿಗದಿಪಡಿಸಿರುವುದು ರೈತರಿಗೆ ಹೆಚ್ಚುವರಿ ಭರವಸೆ ನೀಡಿದೆ.ಈ ನಿರ್ಧಾರದಿಂದ ದೇಶದ ಸುಮಾರು 5 ಕೋಟಿ ಕಬ್ಬು ಬೆಳೆಗಾರರು ಮತ್ತು ಅವರ ಕುಟುಂಬಗಳಿಗೆ ನೆರವಾಗಲಿದ್ದು, ಕರ್ನಾಟಕದಲ್ಲಿಯೂ ಲಕ್ಷಾಂತರ ರೈತರು ಇದರ ಪ್ರಯೋಜನ ಪಡೆಯಲಿದ್ದಾರೆ. ಜೊತೆಗೆ ಸಕ್ಕರೆ ಕಾರ್ಖಾನೆಗಳು ಹಾಗೂ ಸಕ್ಕರೆ ಉದ್ಯಮದ 5 ಲಕ್ಷಕ್ಕೂ ಅಧಿಕ ಕಾರ್ಮಿಕರಿಗೆ ಸಹ ಇದು ಲಾಭಕರವಾಗಲಿದೆ.

ಬೆಳಗಾವಿ, ಬಾಗಲಕೋಟೆ, ಮಂಡ್ಯ, ಮೈಸೂರು, ವಿಜಯಪುರ, ಬಳ್ಳಾರಿ, ದಾವಣಗೆರೆ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳು ಕಬ್ಬು ಬೆಳೆಯಲ್ಲಿ ಮುಂಚೂಣಿಯಲ್ಲಿದ್ದು, ದೇಶದ ಒಟ್ಟು ಸಕ್ಕರೆ ಉತ್ಪಾದನೆಯಲ್ಲಿ ಕರ್ನಾಟಕದ ಪಾಲು ಸುಮಾರು 16% ಇದೆ. ಹೀಗಾಗಿ ಈ ಬೆಲೆ ಏರಿಕೆ ರಾಜ್ಯದ ಕೃಷಿ ಕ್ಷೇತ್ರಕ್ಕೆ ಮಹತ್ವದ ಉತ್ತೇಜನ ನೀಡಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now