Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಗೆಲುವು : ಸಿಎಂ ಸಿದ್ದರಾಮಯ್ಯ ಭೇಟಿಯಾದ ಸಾದಿಕ್ ಪೈಲ್ವಾನ್ ತಂಡ

---Advertisement---

ಸುದ್ದಿಒನ್,ಬೆಂಗಳೂರು ಮೇ.06 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಸಾಧಿಸಿದ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ, ಇಂದು ಸ್ಥಳೀಯ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.

ಸ್ಥಳೀಯ ಮುಖಂಡರಾದ ಸಾದಿಕ್ ಪೈಲ್ವಾನ್ ಹಾಗೂ ಅವರ ತಂಡದವರು, ಶಾಸಕರಾದ ರಿಜ್ವಾನ್ ಅರ್ಷದ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದರು. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಎದುರಾದ ಸವಾಲುಗಳು ಮತ್ತು ಗೆಲುವಿನ ಹಾದಿಯ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

ಕ್ಷೇತ್ರದ ಭರ್ಜರಿ ಗೆಲುವಿಗಾಗಿ ಸಾದಿಕ್ ಪೈಲ್ವಾನ್ ಮತ್ತು ತಂಡದವರು ಮುಖ್ಯಮಂತ್ರಿಗಳಿಗೆ ಹೂಗುಚ್ಛ ನೀಡಿ ಶುಭ ಕೋರಿದರು. ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಿದ ಸಾದಿಕ್ ಪೈಲ್ವಾನ್ ಹಾಗೂ ಇತರೆ ಎಲ್ಲಾ ಸ್ಥಳೀಯ ನಾಯಕರಿಗೆ ಇದೇ ವೇಳೆ ಸಿಎಂ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now