Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉಪಚುನಾವಣೆ ಗೆಲುವು ಸರ್ಕಾರದ ಯೋಜನೆಗಳಿಗೆ ಸಂದ ಜಯ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

---Advertisement---

ಸುದ್ದಿಒನ್,ಮೈಸೂರು ಮೇ.06 : ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಾಧಿಸಿರುವ ಗೆಲುವು ರಾಜ್ಯ ಸರ್ಕಾರದ ಜನಪರ ಯೋಜನೆಗಳಿಗೆ ಜನರು ನೀಡಿದ ಮನ್ನಣೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಪಕ್ಷಗಳ ಯಾವುದೇ ತಂತ್ರಗಾರಿಕೆಗಳು ರಾಜ್ಯದಲ್ಲಿ ಫಲ ನೀಡುವುದಿಲ್ಲ. ಅವರು ಕೇವಲ ಕುತಂತ್ರಗಳಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಸರ್ಕಾರವು ತನ್ನ ಐದು ವರ್ಷಗಳ ಆಡಳಿತಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ ಎಂಬ ವಿಶ್ವಾಸವನ್ನು ಸಿಎಂ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ನನಗೆ ಅಂತಹ ಯಾವುದೇ ಮಾಹಿತಿಯಿಲ್ಲ. ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಯಾವಾಗಲೂ ಬದ್ಧ. ಹೈಕಮಾಂಡ್‌ನಿಂದ ಕರೆ ಬಂದರೆ ಮಾತ್ರ ನವದೆಹಲಿಗೆ ಭೇಟಿ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಕ್ರಿಮಿನಲ್ ಸಂಚು ನಡೆಸಿದೆ ಎಂದು ಸಿಎಂ ಗಂಭೀರ ಆರೋಪ ಮಾಡಿದರು.

ರಾಜೇಗೌಡರಿಗೆ ಬಿದ್ದಿದ್ದ 255 ಅರ್ಹ ಮತಗಳನ್ನು ಉದ್ದೇಶಪೂರ್ವಕವಾಗಿ ಅನರ್ಹಗೊಳಿಸಲಾಗಿದೆ. ಅಂದು ಬಿಜೆಪಿ ಸರ್ಕಾರವಿದ್ದ ಕಾರಣ ಸಿಬ್ಬಂದಿಗಳ ಮೂಲಕ ಮತಪತ್ರಗಳನ್ನು ತಿದ್ದುವ ಕೆಲಸ ನಡೆದಿದೆ. ಈ ಅನ್ಯಾಯದ ವಿರುದ್ಧ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದರು.

ರೈಲ್ವೆ ಇಲಾಖೆಯ ಹುದ್ದೆಗಳಲ್ಲಿ ಕನ್ನಡಿಗರನ್ನು ಕಡೆಗಣಿಸುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಮುಖ್ಯಮಂತ್ರಿಗಳು ತೀವ್ರವಾಗಿ ಖಂಡಿಸಿದರು. ಕೇಂದ್ರದ ಈ ನಡವಳಿಕೆಯು ಕನ್ನಡಿಗರ ವಿರೋಧಿ ಧೋರಣೆಯನ್ನು ಬಿಂಬಿಸುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...