ಸುದ್ದಿಒನ್, ಚಿತ್ರದುರ್ಗ, ಮೇ. 06 : ನಗರಸಭೆಯಲ್ಲಿ ಶಾಸಕರ ನೂತನ ಕಾರ್ಯಾಲಯವನ್ನು ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಬುಧವಾರ ಉದ್ಘಾಟಿಸಿದರು.
ನಗರಸಭೆ ಸಾಮಾನ್ಯ ನಿಧಿ ಹದಿಮೂರು ಲಕ್ಷ ರೂ.ವೆಚ್ಚದಲ್ಲಿ ನೂತನ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಶಾಸಕರು ಬೇಸಿಗೆ ಆರಂಭವಾಗಿರುವುದರಿಂದ ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. 35 ವಾರ್ಡ್‍ಗಳಲ್ಲಿಯೂ ಸ್ವಚ್ಚತೆಯನ್ನು ಕಾಪಾಡಬೇಕು. ಮೂಲಭೂತ ಸೌಕರ್ಯಗಳಾದ ಬೀದಿ ದೀಪ, ರಸ್ತೆ, ಚರಂಡಿ ಕುಡಿಯುವ ನೀರು ಪೂರೈಕೆಗೆ ಒತ್ತು ಕೊಡಲಾಗುವುದು. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವುದಕ್ಕಾಗಿಯೇ ಕಾರ್ಯಾಲಯ ತೆರೆಯಲಾಗಿದೆ. ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಹೇಳಿದರು.

ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಹಾಸ್ಯ ನಟ ದೊಡ್ಡಣ್ಣ, ನಗರಸಭೆ ಮಾಜಿ ಸದಸ್ಯ ಟಿ.ರಮೇಶ್, ಮಹೇಶ್, ಸೈಟ್ ಬಾಬಣ್ಣ ನಗರಸಭೆ ಪೌರಾಯುಕ್ತೆ ಲಕ್ಷ್ಮಿ, ಪ್ರಥಮ ದರ್ಜೆ ಗುತ್ತಿಗೆದಾರ ಬ್ಯಾಲಾಳ್ ಜಯಣ್ಣ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.


















