ಸುದ್ದಿಒನ್, ಚಿತ್ರದುರ್ಗ, ಮೇ. 06 : ರಾಜ್ಯ ಬಿಜೆಪಿಯ ಪ್ರಬಲ ನಾಯಕ, ಪಕ್ಷದ ಮಾಜಿ ಕಾರ್ಯದರ್ಶಿ ಹಾಗೂ ಸಜ್ಜನ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದ ಜಗದೀಶ್ ಹಿರೇಮನಿ (55) ಅವರು ಬುಧವಾರ (ಇಂದು) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಕಾಲಿಕ ನಿಧನವು ಬಿಜೆಪಿ ವಲಯದಲ್ಲಿ ಹಾಗೂ ಅವರ ಅಭಿಮಾನಿಗಳಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ.
ಪ್ರಸ್ತುತ ರಾಜ್ಯ ಮೂಲಸೌಕರ್ಯ ಪುನರ್ನಿರ್ಮಾಣ (SIR) ಸಮಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಗದೀಶ್ ಹಿರೇಮನಿ ಅವರಿಗೆ ಇಂದು ದಿಢೀರ್ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಜಗದೀಶ್ ಹಿರೇಮನಿ ಅವರ ಪಾರ್ಥಿವ ಶರೀರವನ್ನು ಬಾಗಲಕೋಟೆಗೆ ಕೊಂಡೊಯ್ಯುವ ಮಾರ್ಗ ಮಧ್ಯದಲ್ಲಿ ಇಂದು ರಾತ್ರಿ 8:30ಕ್ಕೆ ಚಿತ್ರದುರ್ಗದ ಬಿಜೆಪಿ ಜಿಲ್ಲಾ ಕಚೇರಿ ಬಳಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗುವುದು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಹಾಗೂ ಸಂಸದರಾದ ಗೋವಿಂದ ಕಾರಜೋಳ ಆಗಮಿಸಿ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.
“ಜಗದೀಶ್ ಹಿರೇಮನಿ ಅವರು ಬಿಜೆಪಿಯ ಮಾಜಿ ಕಾರ್ಯದರ್ಶಿಯಾಗಿ ಪಕ್ಷದ ಸಂಘಟನೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ನಿಷ್ಠಾವಂತ ಕಾರ್ಯಕರ್ತರಾಗಿ ಬೆಳೆದು ಬಂದಿದ್ದ ಅವರು, ಅನೇಕ ಯುವ ನಾಯಕರಿಗೆ ರಾಜಕೀಯ ಮಾರ್ಗದರ್ಶಕರಾಗಿದ್ದರು.


















