Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ! ಬಿಜೆಪಿ ಶಾಸಕಿ ಮನೆ ಬಳಿ ಬಾಂಬ್ ಸ್ಫೋಟ

---Advertisement---

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ರಾಜಕೀಯ ಹಿಂಸಾಚಾರ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಸುವೆಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಬೆನ್ನಲ್ಲೇ ಇದೀಗ ಬಿಜೆಪಿ ಶಾಸಕಿ ರತ್ನ ದೇಬನಾಥ್ ನಿವಾಸದ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ. ಈ ಘಟನೆ ರಾಜ್ಯ ರಾಜಕೀಯದಲ್ಲಿ ಭಾರೀ ಆತಂಕ ಮೂಡಿಸಿದೆ.

ಉತ್ತರ 24 ಪರಗಣ ಜಿಲ್ಲೆಯ ಪಾನಿಹಾಟಿ ಕ್ಷೇತ್ರದ ಬಿಜೆಪಿ ನೂತನ ಶಾಸಕಿ ರತ್ನ ದೇಬನಾಥ್ ಅವರ ಮನೆಯ ಸಮೀಪ ಗುರುವಾರ ರಾತ್ರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಫೋಟದ ಶಬ್ದ ಕೇಳಿ ಸ್ಥಳೀಯರು ಭಯಭೀತರಾಗಿ ಮನೆಗಳಿಂದ ಹೊರಬಂದಿದ್ದು, ಕೆಲಕಾಲ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಗಾಯಗೊಂಡ ಕಾರ್ಯಕರ್ತರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಭಾರೀ ಪೊಲೀಸ್ ಪಡೆ ದೌಡಾಯಿಸಿದ್ದು, ಸಂಪೂರ್ಣ ಪ್ರದೇಶವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಸಕಿ ನಿವಾಸ ಹಾಗೂ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಇತ್ತೀಚೆಗೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ಮೇಲೆ ದಾಳಿಗಳು ಹೆಚ್ಚಾಗುತ್ತಿರುವುದಾಗಿ ಬಿಜೆಪಿ ಆರೋಪಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಟೀಕಿಸಿದೆ. ಸುವೆಂದು ಅಧಿಕಾರಿ ಅವರ ಪಿಎ ಚಂದ್ರನಾಥ್ ಹತ್ಯೆ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿರುವ ನಡುವೆಯೇ ಮತ್ತೊಂದು ಸ್ಫೋಟ ಸಂಭವಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಈ ಘಟನೆಯ ಹಿಂದೆ ರಾಜಕೀಯ ವೈಷಮ್ಯ ಇರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿಸ್ಫೋಟ

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now