Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಹಳ್ಳಿಹಕ್ಕಿ ಹೆಚ್. ವಿಶ್ವನಾಥ್

---Advertisement---

ಸುದ್ದಿಒನ್, ಬೆಂಗಳೂರು, ಮೇ.07 : ಕರ್ನಾಟಕ ರಾಜಕೀಯದ ಹಿರಿಯ ಮುತ್ಸದ್ದಿ, ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.

ಸುದ್ದಿಗಾರರ ಜೊತೆಗೆ ಮಾತನಾಡಿದ ಹೆಚ್. ವಿಶ್ವನಾಥ್,ಮುಂಬರುವ ಯಾವುದೇ ರೀತಿಯ ಚುನಾವಣೆಗಳಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ವಿಶ್ವನಾಥ್, ಈ ಮೂಲಕ ಸಕ್ರಿಯ ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯ ರಾಜಕಾರಣದ ವಿವಿಧ ಹಂತಗಳಲ್ಲಿ ಪ್ರಭಾವಶಾಲಿ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ಈಗ ಚುನಾವಣಾ ಪಯಣಕ್ಕೆ ತೆರೆ ಎಳೆದಿದ್ದಾರೆ.

ಬಿಎಸ್ ವೈ ಅಭಿಮಾನೋತ್ಸವಕ್ಕೆ ಆಕ್ಷೇಪ: ಬಿಎಸ್‌ವೈ ಅವರ ‘ಅಭಿಮಾನೋತ್ಸವ’ ಆಚರಣೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, “ಪೋಕ್ಸೋ (POCSO) ನಂತಹ ಗಂಭೀರ ಪ್ರಕರಣದ ಆರೋಪ ಎದುರಿಸುತ್ತಿರುವ ಸಂದರ್ಭದಲ್ಲಿ ಅಭಿಮಾನೋತ್ಸವ ಮಾಡುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದರು.

Join WhatsApp

Join Now

Join Telegram

Join Now