Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಬಿಎಸ್ ವೈ ಅಭಿಮಾನೋತ್ಸವ : ಮೇ.9ರಂದು ಯಡಿಯೂರಪ್ಪ ಬಗ್ಗೆ 2 ಕೃತಿಗಳ ಬಿಡುಗಡೆ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ.07 : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ಸುದೀರ್ಘ ಸಾರ್ವಜನಿಕ ಜೀವನದ ಪ್ರಯಾಣವನ್ನು ಸ್ಮರಿಸುವ ‘ಬಿ.ಎಸ್.ವೈ ಅಭಿಮಾನೋತ್ಸವ’ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯಡಿಯೂರಪ್ಪ ಅವರ ಜೀವನ ಮತ್ತು ಸಾಧನೆಗಳ ಕುರಿತಾದ ಎರಡು ಪ್ರಮುಖ ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದಾರೆ.

ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಈ ಐತಿಹಾಸಿಕ ಸಮಾವೇಶದಲ್ಲಿ ಪುಸ್ತಕಗಳ ಲೋಕಾರ್ಪಣೆ ನಡೆಯಲಿದೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಆರ್. ರಘು (ಕೌಟಿಲ್ಯ) ತಿಳಿಸಿದ್ದಾರೆ.

ಬಿಡುಗಡೆಯಾಗಲಿರುವ ಪುಸ್ತಕಗಳ ವಿವರ

‘ಕೆಂದಾವರೆ-ಕಮಲ ಅರಳಿದ ಕಥೆ’

ಇದು ಬಿ.ಎಸ್.ವೈ ಅವರ ಜೀವನ ಚರಿತ್ರೆಯಾಗಿದ್ದು, ಅವರ ಬಾಲ್ಯದಿಂದ ಇಂದಿನವರೆಗಿನ ಪ್ರಮುಖ ಘಟ್ಟಗಳನ್ನು ಈ ಪುಸ್ತಕದಲ್ಲಿ ದಾಖಲಿಸಲಾಗಿದೆ. ಬರಹಗಾರ ಆರ್. ರಘು ಈ ಕೃತಿಯನ್ನು ನಿರೂಪಿಸಿದ್ದಾರೆ.

ಸದನ ಶಿಕಾರಿ-ಯಡಿಯೂರಪ್ಪನವರ ಗುಡುಗಿನ ನುಡಿಗಳು

ಯಡಿಯೂರಪ್ಪನವರು ತಮ್ಮ ಸುದೀರ್ಘ ಶಾಸಕತ್ವದ ಅವಧಿಯಲ್ಲಿ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಾಡಿದ ಆಯ್ದ ಭಾಷಣಗಳ ಸಂಗ್ರಹ ಇದಾಗಿದೆ. ವಿರೋಧ ಪಕ್ಷದಲ್ಲಿದ್ದಾಗ ಮತ್ತು ಆಡಳಿತ ಪಕ್ಷದಲ್ಲಿದ್ದಾಗ ಅವರು ರೈತರು ಹಾಗೂ ಜನಪರ ಹಿತಾಸಕ್ತಿಗಾಗಿ ನಡೆಸಿದ ಹೋರಾಟದ ಮಾತುಗಳು ಇದರಲ್ಲಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now