ಹಿಜಾಬ್ ಹಿಂದಿರುವ “ಕಾಣದ ಕೈ”ಗಳು ತಿಳಿಯದ್ದಷ್ಟು ಮೂರ್ಖರಲ್ಲ : ಕಾಂಗ್ರೆಸ್ ಮೇಲೆ ಬಿಜೆಪಿ ಆರೋಪ

1 Min Read

ಬೆಂಗಳೂರು: ಕುಂದಾಪುರ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ವಿವಾದ ನಿಲ್ಲುವಂತೆ ಕಾಣುತ್ತಿಲ್ಲ. ನಿನ್ನೆ ಕಾಲೇಜು ಬಳಿ ಪೋಷಕರು ಕೂಡ ಪ್ರತಿಭಟನೆ ಮಾಡಿದ್ದು, ಇದರ ಪರಿಣಾಮ ಇಂದು ಕಾಲೇಜಿಗೆ ರಜೆ ಘೋಷಿಸಲಾಗಿದೆ. ಈ ಬೆನ್ನಲ್ಲೇ ಬಿಜೆಪಿ ಈ ಆರೋಪವನ್ನ ಕಾಂಗ್ರೆಸ್ ಮೇಲೆ ಹಾಕಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ರಾಜಕೀಯ ಪ್ರೇರಿತ. ಇದರ ಹಿಂದೆ ಕಾಂಗ್ರೆಸ್‌ ಕೈವಾಡವಿದೆ. ಜನಮಾನಸದಿಂದ ಮಾಸಿ ಹೋಗುತ್ತಿರುವ ಕಾಂಗ್ರೆಸ್ ಪಕ್ಷ ಮತೀಯವಾದಿ ಶಕ್ತಿಗಳ ಜತೆ ಸೇರಿ ಈ ವಿವಾದವನ್ನು ವಿಸ್ತಾರಗೊಳಿಸುತ್ತಿದೆ. ಇಲ್ಲಿರುವುದು ಮತ ಬ್ಯಾಂಕ್ ರಾಜಕಾರಣ ಮಾತ್ರ.

ಶಿಕ್ಷಣ ವ್ಯವಸ್ಥೆಯಲ್ಲಿ ಮತೀಯವಾದವನ್ನು ತುರುಕಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರೇ, ನೀವು ಸಿಎಂ ಆಗಿದ್ದಾಗ ಇದ್ದ ನಿಯಮಗಳೇ ಈಗ ಇರುವುದು. ಅಂದು ಇಲ್ಲದ ವಿವಾದ ಇಂದೇಕೆ?. ಚಾಮರಾಜಪೇಟೆಗೆ ವಲಸೆ ಹೋಗುವುದಕ್ಕಾಗಿ @siddaramaiah ಅವರು ಹಿಜಾಬ್ ವಿಚಾರ ಪ್ರಸ್ತಾಪಿಸುತ್ತಿದ್ದಾರೆ.

ಒಡೆದು ಅಳುವ ನೀತಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಬ್ರಿಟಿಷರಿಂದ ಬಂದ ಬಳುವಳಿ. ಧರ್ಮಗಳ ಮಧ್ಯೆ, ಜಾತಿಗಳ ಮಧ್ಯೆ, ಒಡೆದು ಹಾಕುವ ಕಾಂಗ್ರೆಸ್ ಆಟ ನಡೆಯಲ್ಲ. ಹಿಜಾಬ್ ಪ್ರಕರಣದ ಹಿಂದಿರುವ “ಕಾಣದ ಕೈ”ಗಳು ಯಾರು ಎಂಬುದು ತಿಳಿಯದಷ್ಟು ಮೂರ್ಖರು ಯಾರೂ ಇಲ್ಲ ಎಂದು ಟ್ವೀಟ್ ಮಾಡಿದೆ.

Share This Article
Leave a Comment

Leave a Reply

Your email address will not be published. Required fields are marked *